ಮಡಿಕೇರಿ ಆ.1 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮಡಿಕೇರಿ ಕೊಡಗು ಗೌಡ ಯುವ ವೇದಿಕೆ ಹಾಗೂ ನರಿಯಂದಡ ಅಯ್ಯಪ್ಪ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಆ.13 ರಂದು ಪಾರಾಣೆಯಲ್ಲಿ ‘ಆಟಿ ಜಂಬರ-2023’ ನಡೆಯಲಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅಯ್ಯಪ್ಪ, ಯುವಕ ಸಂಘದ ಗೌರವ ಅಧ್ಯಕ್ಷ ತೋಟಂಬೈಲು ಅನಂತ ಕುಮಾರ್, ಅಂದು ಬೆಳಿಗ್ಗೆ 9 ಗಂಟೆಗೆ ಪಾರಾಣೆ ಗೌಡ ಸಮಾಜದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಪಾರಾಣೆ ಗೌಡ ಸಮಾಜದ ಅಧ್ಯಕ್ಷ ಮುಕ್ಕಾಟಿ ಕುಶಾಲಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನರಿಯಂದಡ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷ ಬೆಳಿಯಂಡ್ರ ಹರಿಪ್ರಸಾದ್ ವಹಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ನರಿಯಂದಡ ಅಯ್ಯಪ್ಪ ಯುವಕ ಸಂಘದ ಸ್ಥಾಪಕ ಅಧ್ಯಕ್ಷ ಹಾಗೂ ಮಾಜಿ ಸೈನಿಕ ಬೆಳಿಯಂಡ್ರ ಲಕ್ಷ್ಮಣ್ ಪಾಲ್ಗೊಳ್ಳಲಿದ್ದು, ಕೊಡಗು ಗೌಡ ಯುವ ವೇದಿಕೆ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಗೌರವ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.
ತೋಟಂಬೈಲ್ ಅನಂತ್‍ಕುಮಾರ್ ಅವರ ಒಕ್ಕಣೆ ನಂತರ ನಾಟಿ ನೆಡಲಾಗುವುದು. ನಂತರ ಬೆಳಿಗ್ಗೆ 9.30ಕ್ಕೆ ಆಟಿ ಜಂಬರದ ಪ್ರದರ್ಶನ ನಡೆಯಲಿದ್ದು, ಪುರುಷರಿಗೆ ಕಾಯಿಗೆ ಕಲ್ಲು ಹೊಡೆಯುವ ಸ್ಪರ್ಧೆ, ಮಹಿಳೆಯರಿಗೆ ಕಲ್ಲಾಟ ಮತ್ತು ಚಿಲ್ಕಿ ಆಟ, 60 ವರ್ಷ ಮೇಲ್ಪಟ್ಟವರಿಗೆ ಚೆನ್ನೆಮಣೆ ಆಟ, 1 ರಿಂದ 4ನೇ ತರಗತಿ ಮಕ್ಕಳಿಗೆ ಕಾಳು ಹೆಕ್ಕುವ ಸ್ಪರ್ಧೆ, 5 ರಿಂದ 8ನೇ ತರಗತಿ ಮಕ್ಕಳಿಗೆ ಕಡ್ಡಿ ಆಟ, 9 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೋಳಿ ಜಗಳ ಸ್ಪರ್ಧೆ ನಡೆಯಲಿದೆಯೆಂದು ಮಾಹಿತಿ ನೀಡಿದರು.
ಮಹಿಳೆಯರಿಗೆ ಮದ್ದ್ ಸೊಪ್ಪು, ಕೆಸ, ನಾಡುಕೋಳಿ, ಎಸಂಡ್, ಏಡಿ, ಕಣಿಲೆ ಸೇರಿದಂತೆ ಐದು ಬಗೆಯ ಅಡುಗೆ ಸ್ಪರ್ಧೆ ನಡೆಯಲಿದ್ದು, ಬಹುಮಾನ ನೀಡಲಾಗುವುದು. ಇದರೊಂದಿಗೆ ವಿವಿಧ ಕಾಡುಹಣ್ಣುಗಳನ್ನು ತಂದವರಿಗೆ ವಿಶೇಷ ಬಹುಮಾನ ನೀಡಲಾಗುವುದು. ಕಾರ್ಯಕ್ರಮದಲ್ಲಿ ಹಿಂದಿನ ಕಾಲದಲ್ಲಿ ಬಳಸುತ್ತಿದ್ದ ವಸ್ತುಗಳ ಪ್ರದರ್ಶನ ನಡೆಯಲಿದೆಯೆಂದು ವಿವರಗಳನ್ನಿತ್ತರು.
ಅಂದು ಬೆಳಿಗ್ಗೆ 11.30 ಗಂಟೆಗೆ ಕೊಡಗು ಗೌಡ ಯುವ ವೇದಿಕೆ ಅಧ್ಯಕ್ಷ ಪಾಣತಲೆ ಜಗದೀಶ್ ಮಂದಪ್ಪ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಕೊಡಗು ಜಾನಪದ ಪರಿಷತ್ತು ಅಧ್ಯಕ್ಷ ಹಾಗೂ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ, ಪಾರಾಣೆ ಗೌಡ ಸಮಾಜದ ಅಧ್ಯಕ್ಷ ಮುಕ್ಕಾಟಿ ಕುಶಾಲಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಾದ ಮಿಲನಾ ಭರತ್ ಪಾಲ್ಗೊಳ್ಳಲಿದ್ದಾರೆ.
ಮೈಸೂರು ಶೇಷಾದ್ರಿಪುರಂ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಸಿ.ಪಿ.ಲಾವಣ್ಯ ಕೊಟ್ಟಕೇರಿಯನ ‘ಆಟಿ ತಿಂಗಳ ವಿಶೇಷತೆ’ ಎಂಬ ವಿಷಯದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ನರಿಯಂದಡ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷ ಬೆಳಿಯಂಡ್ರ ಹರಿಪ್ರಸಾದ್ ಉಪಸ್ಥಿತರಿರಲಿದ್ದಾರೆಂದು ತಿಳಿಸಿದರು.
ಮಧ್ಯಾಹ್ನ 1 ಗಂಟೆಗೆ ಆಟಿ ತಿಂಗಳ ಬಗೆ ಬಗೆ ಅಡುಗೆ “ಬೊಂಬಾಟ್ ಊಟ” ನಡೆಯಲಿದ್ದು, ಮಧ್ಯಾಹ್ನ 2.30 ಕ್ಕೆ ಸಾಂಸ್ಕೃತಿಕ ಜಂಬರ ನಡೆಯಲಿದೆ. ಅರೆಭಾಷೆ ಗುಂಪು ನೃತ್ಯ, ಅರೆಭಾಷೆ ಜಾನಪದ ಹಾಡು, ಅಡುಗೆ ಪೈಪೋಟಿ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸ್ಪರ್ಧಿಸುವವರು ಆ.6ರ ಒಳಗಾಗಿ ಬೆಳಿಯಂಡ್ರ ರಾಧಿಕ-9481400175, 9731303445, ಕುಕ್ಕೇರ ಜಯ ಲಕ್ಷ್ಮಣ – 9483840693 ಹೆಸರು ನೋಂದಾಯಿಸಿಕೊಳ್ಳುವಂತೆ ಕೋರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕೊಡಗು ಗೌಡ ಯುವ ವೇದಿಕೆ ಉಪಾಧ್ಯಕ್ಷ ಕೋಚನ ಅನುಪ್, ನಿರ್ದೇಶಕ ಪೊಕುಳಂಡ್ರ್ರ್ರ ಧನೋಜ್, ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷ ಬೆಳ್ಯಂಡ್ರ ಹರಿ ಪ್ರಸಾದ್, ಆಹಾರ ಸಮಿತಿ ಅಧ್ಯಕ್ಷ ಪರಿಚನ ಸತೀಶ್ ಹಾಗೂ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಕ್ಕೇರ ಲಕ್ಷ್ಮಣ್ ಉಪಸ್ಥಿತರಿದ್ದರು.
Breaking News
- *ಜ.26 ರಂದು ಕೂಡಿಗೆಯಲ್ಲಿ ಮಾನವ ಸರಪಳಿ ಹಾಗೂ ಸೌಹಾರ್ದ ಸಮ್ಮೇಳನ*
- *ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಮೂರ್ನಾಡು ಭಾರತೀಯ ನೃತ್ಯಕಲಾ ಶಾಲೆಯ ವಿದ್ಯಾರ್ಥಿಗಳ ಸಾಧನೆ*
- *ಕಟ್ಟೆಮಾಡು ಪ್ರಕರಣ : ಉಸ್ತುವಾರಿ ಸಚಿವರು, ಶಾಸಕರುಗಳು ತಮ್ಮ ಜವಾಬ್ದಾರಿಯನ್ನು ಪ್ರದರ್ಶಿಸಲಿ*
- *ವಸತಿ ಸಚಿವರನ್ನು ಭೇಟಿ ಮಾಡಿದ ಅಲ್ಪಸಂಖ್ಯಾತ ಮುಖಂಡರು : ಮೂಲ ಸೌಕರ್ಯಗಳ ಕುರಿತು ಚರ್ಚೆ*
- *ಎಂ.ಎಂ.ಸುಪ್ರಿತಾಗೆ ಚಿನ್ನದ ಪದಕ*
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*