ಮಡಿಕೇರಿ ಆ.1 : ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ವತಿಯಿಂದ ಕಕ್ಕಡ ಪದ್‍ನೆಟ್ಟ್ ಆಚರಣೆ ಆ.3 ರಂದು ಅಖಿಲ ಕೊಡವ ಸಮಾಜದ ಕಟ್ಟಡದಲ್ಲಿ ನಡೆಯಲಿದೆ.
ಈ ಕುರಿತು ಮಾಹಿತಿ ನೀಡಿರುವ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ, ಅಂದು ಬೆಳಗ್ಗೆ 10.30 ಗಂಟೆಗೆ ಕೂಟದ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಮಡಿಕೇರಿ ಅಕಾಶವಾಣಿ ಕೇಂದ್ರದಲ್ಲಿ 30 ವರ್ಷಗಳ ಕಾಲ ಉದ್ಘೋಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಕೂಪದಿರ ಶಾರದಾ ನಂಜಪ್ಪ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಹ್ಮಣಿ, ಉಪಾಧ್ಯಕ್ಷ ಅಜ್ಜಿಕುಟ್ಟೀರ ಸುಬ್ರಹ್ಮಣಿ, ಕಾರ್ಯದರ್ಶಿ ಅಮ್ಮಣಿಚಂಡ ರಾಜ ನಂಜಪ್ಪ, ಖಜಾಂಚಿ ಮಂಡೆಪಂಡ ಸುಗುಣ ಮುತ್ತಣ್ಣ ಹಾಗೂ ಪೊಮ್ಮಕ್ಕಡ ಕೂಟದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ರಾಣು ಅಪ್ಪಣ್ಣ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕಕ್ಕಡ ಪದ್‍ನೆಟ್ಟ್ ಅಂಗವಾಗಿ ಮಾಡುವ ವಿಶೇಷ ಖಾದ್ಯಗಳನ್ನು ಪೊಮ್ಮಕ್ಕಡ ಕೂಟದ ಪದಾಧಿಕಾರಿಗಳೇ ತಯಾರಿಸಿ, ಭೋಜನ ವ್ಯವಸ್ಥೆಯನ್ನು ಹಮ್ಮಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
Breaking News
- *ಕಳೆದು ಹೋಗಿದೆ*
- *ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
- *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*