ಮಡಿಕೇರಿ ಆ.1 : ನಗರದ ಸರಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ನಿವೃತ್ತ ಉಪ ಪ್ರಾಂಶುಪಾಲರಾದ ನಳಿನಿ ಪೂವಯ್ಯ ಅವರಿಗೆ ಶಾಲಾ ಅಭಿವೃದ್ಧಿ ಸಮಿತಿ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಶಾಲೆಯ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಮಿತಿಯ ಪ್ರಮುಖರು ಹಾಗೂ ಶಿಕ್ಷಕರು ನಳಿನಿ ಪೂವಯ್ಯ ಅವರನ್ನು ಸನ್ಮಾನಿಸಿ ಗೌರವಿಸಿದರು. ನಿವೃತ್ತ ಜೀವನ ಸುಖಕರವಾಗಿರಲೆಂದು ಶುಭ ಹಾರೈಸಿದರು.
ಈ ಸಂದರ್ಭ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಆರ್.ಪಿ.ಚಂದ್ರಶೇಖರ್, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







