ಮಡಿಕೇರಿ ಆ.1 : ಮನೆಯ ಹಿಂಭಾಗದ ಬರೆ ಕುಸಿಯದಂತೆ ರಕ್ಷಣೆಗಾಗಿ ಪಂಚಾಯ್ತಿಯಿಂದ ನಿರ್ಮಿಸಿದ್ದ ತಡೆಗೋಡೆಯ ಮೇಲೆ ಜನ ಪ್ರತಿನಿಧಿಯೊಬ್ಬರು ಕಾಂಪೌಂಡ್ ವಾಲ್ ನಿರ್ಮಿಸುವ ಮೂಲಕ ಆತಂಕ ಸೃಷ್ಟಿಸಿದ್ದಾರೆಂದು ಸುಂಟಿಕೊಪ್ಪದ ಪಂಪ್ ಹೌಸ್ ಬಡಾವಣೆಯ ನಿವಾಸಿ ಜಿ.ಎನ್.ದಿನೇಶ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಪ್ ಹೌಸ್ ಬಡಾವಣೆಯಲ್ಲಿನ ತಮ್ಮ ಮನೆಯ ಹಿಂಭಾಗದ ಬರೆ ಕುಸಿಯದಂತೆ 2009 ರಲ್ಲಿ ಗ್ರಾಮ ಪಂಚಾಯ್ತಿಯಿಂದ ಸುಮಾರು 30 ಅಡಿ ಉದ್ದದ, 8 ಅಡಿ ಎತ್ತರದ ತಡೆಗೋಡೆಯನ್ನು ನಿರ್ಮಿಸಲಾಗಿತ್ತು. ಈ ತಡೆಗೋಡೆಯ ಮೇಲ್ಭಾಗದಲ್ಲಿ ಸುಮಾರು ಮೂವತ್ತು ಅಡಿ ದೂರದಲ್ಲಿ ಪಂಚಾಯ್ತಿ ಜನಪ್ರತಿನಿಧಿಯೊಬ್ಬರ ಮನೆ ಇದೆ. ಈ ತಡೆಗೋಡೆಯ ಮೇಲೆ ಅನಧಿಕೃತವಾಗಿ ಕಾಂಪೌಂಡ್ ವಾಲ್ ನಿರ್ಮಿಸಿ ಮಣ್ಣು ತುಂಬಲಾಗಿದೆ ಎಂದು ಆರೋಪಿಸಿದರು.
ಮಣ್ಣಿನ ಹೆಚ್ಚಿನ ಒತ್ತಡದಿಂದಾಗಿ ಹಳೆಯ ತಡೆಗೋಡೆಯ ಅಲ್ಲಲ್ಲಿ ಬಿರುಕುಗಳು ಮೂಡಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ. ತಡೆಗೋಡೆ ಕುಸಿದಲ್ಲಿ ನಮ್ಮ ಮನೆಗೆ ತೀವ್ರ ಹಾನಿ ಸಂಭವಿಸಲಿದೆ ಎಂದು ಬೇಸರ ವ್ಯಕ್ತಪಡಿಸಿದರು.
2022 ರ ಜ.24 ರಂದು ನಡೆದ ಸುಂಟಿಕೊಪ್ಪ ಗ್ರಾಮ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ನ್ಯಾಯಕ್ಕಾಗಿ ಅರ್ಜಿ ಸಲ್ಲಿಸಿದ್ದೆ. ಈ ಸಂದರ್ಭ ಏರ್ಪಡಿಸಿದ್ದ ನ್ಯಾಯ ಸಮಿತಿಯಲ್ಲಿ ತಡೆಗೋಡೆ ಮೇಲೆ ಕಾಂಪೌಂಡ್ ವಾಲ್ ನಿರ್ಮಿಸಿದ ಜನಪ್ರತಿನಿಧಿಯೇ ಹಾಜರಿದ್ದು ಸಭೆ ನಡೆಸಿದ್ದರು. ಆ ಸಂದರ್ಭ ನಮ್ಮ ಮನೆಗೆ ಹಾನಿಯಾಗದಂತೆ ತಡೆಗೋಡೆಯನ್ನು ಪುನರ್ ನಿರ್ಮಿಸಲು ಒಪ್ಪಿದ್ದರಾದರು, ಇಲ್ಲಿಯವರೆಗೂ ಅದು ಕಾರ್ಯಗತವಾಗಿಲ್ಲ. ಪ್ರಸಕ್ತ ಸಾಲಿನ ಜ.6 ರಂದು ಜಿಲ್ಲಾ ಪಂಚಾಯ್ತಿ ಸಿಇಒ ಅವರಿಗೆ ದೂರು ನೀಡಿದ್ದೆ. ಅವರು ಇಒ ರವರಿಗೆ ಪುಕಾರು ಕಳುಹಿಸಿ ಸ್ಥಳ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಆದರೆ, ಇಲ್ಲಿಯವರೆಗು ಯಾವುದೇ ಕ್ರಮ ಕೈಗೊಂಡಿಲ್ಲವೆಂದರು.
ಕಾಂಪೌಂಡ ವಾಲ್ ನಿರ್ಮಾಣದಿಂದ ಆತಂಕದ ಸ್ಥಿತಿಯಲ್ಲಿರುವ ತಡೆಗೋಡೆಯನ್ನು ಪುನರ್ ನಿರ್ಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತೇವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ವಾರದ ಬಳಿಕ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ದಿನೇಶ್ ಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ದಿನೇಶ್ ಕುಮಾರ್ ಅವರ ತಂದೆ ಜಿ.ಕೆ. ನರಸಿಂಹ ಹಾಗೂ ತಾಯಿ ಸಾಕಮ್ಮ ಉಪಸ್ಥಿತರಿದ್ದರು.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*