ಮಡಿಕೇರಿ ಆ.1 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ನೂತನ ಜಿಲ್ಲಾಧ್ಯಕ್ಷರನ್ನಾಗಿ ಪಿ.ಎ.ಹನೀಫ್ ಅವರನ್ನು ಆಯ್ಕೆ ಮಾಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಖಲೀಲ್ ಭಾಷಾ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿರುವ ಉತ್ಸಾಹಿ ಯುವ ನಾಯಕ ಹನೀಫ್ ಅವರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಿರುವುದರಿಂದ ಜಿಲ್ಲೆಯಲ್ಲಿ ಪಕ್ಷ ಮತ್ತಷ್ಟು ಬಲಿಷ್ಠವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನೂತನ ಅಧ್ಯಕ್ಷರು ಅಲ್ಪಸಂಖ್ಯಾತರ ಘಟಕದ ಎಲ್ಲಾ ವಿಭಾಗಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿ, ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಬೆಳವಣಿಗೆಯಲ್ಲಿ ತೊಡಗಿಸಿಕೊಳ್ಳಬೇಕು. ಪಿ.ಎ.ಹನೀಫ್ ಅವರನ್ನು ಆಯ್ಕೆ ಮಾಡಿದ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಕೆ.ಅಬ್ದುಲ್ ಜಬ್ಬರ್ ಹಾಗೂ ಶಿಫಾರಸ್ಸು ಮಾಡಿದ ಜಿಲ್ಲೆಯ ಎಲ್ಲಾ ಮುಖಂಡರುಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಖಲೀಲ್ ಭಾಷಾ ತಿಳಿಸಿದ್ದಾರೆ.








