ಮಡಿಕೇರಿ ಆ.2 : ಕೊಡವ ಎಂ.ಎ ಸ್ನಾತಕೋತ್ತರ ವಿಭಾಗ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮತ್ತು ಕೊಡವ ಮಕ್ಕಡ ಕೂಟದ ಸಹಯೋಗದಲ್ಲಿ ಆ.5 ರಂದು “ಕರ್ಮ-ಪ್ರಾರಬ್ಧ” ಕೊಡವ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಗ್ಗೆ 10.30 ಗಂಟೆಗೆ ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಸಾಹಿತಿ ಕೊಟ್ಟುಕತ್ತಿರ ಜಾಲಿ ಸೋಮಣ್ಣ ಬರೆದಿರುವ, ಕೊಡವ ಮಕ್ಕಡ ಕೂಟದ 71ನೇ ಪುಸ್ತಕ “ಕರ್ಮ-ಪ್ರಾರಬ್ಧ” ಅನಾವರಣಗೊಳ್ಳಲಿದೆ.
ಫೀ.ಮಾ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಡಾ.ಮೇಜರ್ ರಾಘವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಂ.ಎ ಕೊಡವ ವಿಭಾಗದ ಸಂಯೋಜಕ ಮೇಚಿರ ರವಿಶಂಕರ್ ನಾಣಯ್ಯ, ಸಾಹಿತಿಗಳು ಹಾಗೂ ಎಂ.ಎ ಕೊಡವ ವಿಭಾಗದ ಉಪನ್ಯಾಸಕರಾದ ಬಾಚರಣಿಯಂಡ ಅಪ್ಪಣ್ಣ, ಬಾಚರಣಿಯಂಡ ರಾಣು ಅಪ್ಪಣ್ಣ, “ಕರ್ಮ-ಪ್ರಾರಬ್ಧ” ಪುಸ್ತಕದ ಬರಹಗಾರ ಹಾಗೂ ಸಾಹಿತಿ ಕೊಟ್ಟುಕತ್ತಿರ ಜಾಲಿ ಸೋಮಣ್ಣ, ಕೊಡವ ಎಂ.ಎ ವಿದ್ಯಾರ್ಥಿ ಹಾಗೂ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಬೊಳ್ಳಜಿರ ಬಿ.ಅಯ್ಯಪ್ಪ ಮನವಿ ಮಾಡಿದ್ದಾರೆ.
::: ದಾಖಲೆಯ 71 ನೇ ಪುಸ್ತಕ :::
ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಕಾಳಜಿ, ಸಂಸ್ಕೃತಿ, ಸಾಹಿತ್ಯ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ ನಿರಂತರ ಕಾರ್ಯನಿರ್ವಹಣೆಯಲ್ಲಿ ತೊಡಗಿರುವ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ನೇತೃತ್ವದ ಕೊಡವ ಮಕ್ಕಡ ಕೂಟ ಜಿಲ್ಲೆಯ ಸಾಹಿತ್ಯ ಪ್ರತಿಭೆಗಳಿಗೆ ನಿರಂತರವಾಗಿ ವೇದಿಕೆಯನ್ನು ಕಲ್ಪಿಸಿಕೊಡುತ್ತಾ ಬಂದಿದೆ. ಕಳೆದ ಅನೇಕ ವರ್ಷಗಳಿಂದ ಉದಯೋನ್ಮುಖ ಬರಹಗಾರರಿಗೆ ಪ್ರೋತ್ಸಾಹ ನೀಡುತ್ತಾ ಕೊಡಗಿನ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದೆ. ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಒಟ್ಟು 70 ಕೃತಿಗಳನ್ನು ಬಿಡುಗಡೆ ಮಾಡಿದ್ದು, ಇದೀಗ 71 ನೇ ಪುಸ್ತಕವಾಗಿ “ಕರ್ಮ-ಪ್ರಾರಬ್ಧ” ವನ್ನು ಬಿಡುಗಡೆ ಮಾಡುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಅಯ್ಯಪ್ಪ ಹೇಳಿದ್ದಾರೆ.
ಕೊಡವ ಮಕ್ಕಡ ಕೂಟದ ಐದು ಪುಸ್ತಕಗಳಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಶಸ್ತಿ ಲಭಿಸಿದ್ದು, ನಾಲ್ಕು ಪುಸ್ತಕಗಳು ಕೊಡವ ಚಲನಚಿತ್ರವಾಗಿ ತೆರೆ ಮೇಲೆ ಪ್ರದರ್ಶನ ಕಂಡಿದೆ.
ಅಲ್ಲದೆ ಹಲವು ದಾಖಲೀಕರಣ ಪುಸ್ತಕ, ಸಾಧಕರ ವಿವರದ ಪುಸ್ತಕ ಕೊಡಗಿನ ಹಾಗೂ ಕೊಡವ ಆಚಾರ, ವಿಚಾರಗಳಿಗೆ ಸಂಬಂಧಪಟ್ಟ ಪುಸ್ತಕ, ಮಹಾವೀರ ಚಕ್ರ ಪುರಸ್ಕೃತ ವೀರ ಯೋಧರ ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಗಿದೆ.
::: ಜಾಲಿ ಸೋಮಣ್ಣ ಪರಿಚಯ :::
ಜಾಲಿ ಸೋಮಣ್ಣ ಬೆಂಗ್‍ನಾಡ್ ಕೋಪಟ್ಟಿಯ ಕೊಟ್ಟುಕತ್ತಿರ ಒಕ್ಕದ ಪೊನ್ನಪ್ಪ-ಅಕ್ಕವ್ವ ದಂಪತಿಯ ಆರನೇ ಪುತ್ರ. ಚೆಟ್ಟಿಮಾನಿ, ಚೇರಂಬಾಣೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಮಡಿಕೇರಿಯಲ್ಲಿ ಕಲಾ ವಿಭಾಗದಲ್ಲಿ ಪದವಿ ಪಡೆದು, ಇಂಡಿಯನ್ ನೇವಿಯಲ್ಲಿ ಹತ್ತು ವರ್ಷ ಸೇವೆ ಸಲ್ಲಿಸಿದರು. ನಂತರ ಇಂಡೋ ಪಾಕ್ ಸೇನೆಯಲ್ಲಿ ಮತ್ತು ಒಂದು ವರ್ಷ ಮಾಲ್ಮಾ ದೇಶದಲ್ಲಿ ಸೇವೆ ಸಲ್ಲಿಸಿರುವುದು ವಿಶೇಷ. ಮೈಸೂರಿನ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಬ್ಯಾಂಕ್ ನಲ್ಲಿ ಮೂವತ್ತೊಂದು ವರ್ಷ ಸೇವೆ ಸಲ್ಲಿಸಿ, ಪ್ರಧಾನ ವ್ಯವಸ್ಥಾಪಕರಾಗಿ ನಿವೃತ್ತಿ ಹೊಂದಿದ್ದಾರೆ.
ನಂತರ ಬೆಂಗಳೂರಿನ ಗಾಂಧಿನರದಲ್ಲಿ ಶ್ರೀ ಕಾಳಿದಾಸ ಸಹಕಾರ ಬ್ಯಾಂಕ್ ನಿಯಮಿತದಲ್ಲಿ ಬ್ಯಾಂಕಿಂಗ್ ಸಲಹೆಗಾರರಾಗಿ ಎಪ್ಪತ್ತೊಂದನೇ ವಯಸ್ಸಿನವರೆಗೂ ಕಾರ್ಯನಿರ್ವಹಿಸಿದ್ದಾರೆ.
ಪಿರಿಯಪಟ್ಟಣ ಕೊಡವ ಸಮಾಜ ಅಧ್ಯಕ್ಷ, ಕನ್ನಡ ಬಳಗ ಅಧ್ಯಕ್ಷ, ಕೊಡಗು ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ, ಕೊಡಗು ಜಿಲ್ಲಾ ಬ್ಯಾಂಕ್ ಅಧಿಕಾರಿ ಸಂಘದ ಕಾಯದರ್ಶಿ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದ ಸಮಿತಿ ಸದಸ್ಯ, ಪೊನ್ನಂಪೇಟೆ ಕ್‍ಗ್ಗಟ್ಟ್ ನಾಡ್ ಹಿರಿಯ ನಾಗರೀಕರ ವೇದಿಕೆ ಅಧ್ಯಕ್ಷ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಅಧ್ಯಕ್ಷರಾಗಿ ಹಾಗೂ ವಿವಿಧ ಸಂಘಗಳ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪತ್ನಿ ಸತ್ಯ ಕುಸುಮ ಹಾಗೂ ಪುತ್ರಿ ಪ್ರೀತಿ ನಮ್ರತ ಬೆಂಗಳೂರಿನಲ್ಲಿ ವಾಸವಿದ್ದು, ಮತ್ತೋರ್ವ ಪುತ್ರಿ ನೀತು ಸೌಮ್ಯ ದುಬಾಯಿಯಲ್ಲಿ ನೆಲೆಸಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*