ಮಡಿಕೇರಿ ಆ.2 : ಅಧಿಕ ಸದಸ್ಯರನ್ನು ಹೊಂದಿರುವ ಸಿದ್ದಾಪುರ ಗ್ರಾ.ಪಂ ಯ ಎರಡನೇ ಅವಧಿಯ ಆಡಳಿತಕ್ಕೆ ಅಧ್ಯಕ್ಷರಾಗಿ ಪ್ರೇಮ ಗೋಪಾಲ ಹಾಗೂ ಉಪಾಧ್ಯಕ್ಷರಾಗಿ ಪಳನಿಸ್ವಾಮಿ ಹೆಚ್.ಎನ್ ಆಯ್ಕೆಯಾಗಿದ್ದಾರೆ.
ಒಟ್ಟು 25 ಸದಸ್ಯ ಬಲದ ಗ್ರಾ.ಪಂ ಯಲ್ಲಿ 15 ಬಿಜೆಪಿ, 9 ಕಾಂಗ್ರೆಸ್ ಬೆಂಬಲಿತರು ಹಾಗೂ ಒಬ್ಬರು ಪಕ್ಷೇತರರು ಇದ್ದಾರೆ. ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಎಸ್.ಸಿ (ಪರಿಶಿಷ್ಟ ಜಾತಿ) ಮಹಿಳೆಗೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿತ್ತು. ಸಂಖ್ಯಾ ಬಲದ ಆಧಾರದಲ್ಲಿ ಎಲ್ಲವೂ ನಡೆದಿದ್ದರೆ ಬಿಜೆಪಿ ಬೆಂಬಲಿತರೇ ಮತ್ತೆ ಅಧಿಕಾರ ಹಿಡಿಯಬೇಕಾಗಿತ್ತು. ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ತಂತ್ರಗಾರಿಕೆ ಬಳಸಿ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಸಿದ್ದಾಪುರ ಗ್ರಾ.ಪಂ ಯನ್ನು ತನ್ನದಾಗಿಸಿಕೊಂಡಿದೆ.
ಗುಪ್ತ ಮತದಾನದಲ್ಲಿ ಪ್ರೇಮ ಗೋಪಾಲ ಅವರಿಗೆ 14 ಮತಗಳು ಮತ್ತು ಬಿಜೆಪಿ ಬೆಂಬಲಿತ ಹೆಚ್.ಧನಲಕ್ಷ್ಮಿ ಅವರಿಗೆ 11 ಮತಗಳು ಲಭಿಸಿದವು. ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಪಳನಿಸ್ವಾಮಿ ಅವರಿಗೆ 14 ಮತಗಳು ಮತ್ತು ಬಿಜೆಪಿ ಬೆಂಬಲಿತ ಎಂ.ಎ.ಆನಂದ ಅವರಿಗೆ 11 ಮತಗಳು ದೊರೆಯಿತು.
ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಹೆಚ್.ಧನಲಕ್ಷ್ಮಿ ನಾಮಪತ್ರ ಸಲ್ಲಿಸಿದರೂ ಬಿಜೆಪಿ ಬೆಂಬಲಿತರಾಗಿರುವ ಸದಸ್ಯೆ ಪ್ರೇಮ ಗೋಪಾಲ ಅವರು ಕೂಡ ಕಾಂಗ್ರೆಸ್ ಸದಸ್ಯರ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಸುವ ಮೂಲಕ ಅಚ್ಚರಿ ಮೂಡಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರೀತಿ ಚಿಕ್ಕ ಮಾದಯ್ಯ ಅವರು ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*