ಮಡಿಕೇರಿ ಆ.2 : ಬಡವರು, ಕಾರ್ಮಿಕರು ಹಾಗೂ ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಡಯಾಲಿಸಿಸ್ ಕೇಂದ್ರದ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕೆಂದು ಎಐಟಿಯುಸಿ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಡಯಾಲಿಸಿಸ್ ಕೇಂದ್ರದ ನೌಕರರು ಬುಧವಾರದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಆರಂಭಿಸಿರುವುದರಿಂದ ಕಾರ್ಮಿಕ ವರ್ಗವೇ ಹೆಚ್ಚಾಗಿರುವ ಕೊಡಗು ಜಿಲ್ಲೆಯ ಆಸ್ಪತ್ರೆಗಳಲ್ಲಿ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಸ್ಥಗಿತಗೊಳಿಸಿ ಧರಣಿ ನಡೆಸಲು ರಾಜ್ಯ ಡಯಾಲಿಸಿಸ್ ನೌಕರರ ಸಂಘ ಕರೆ ನೀಡಿದೆ. ಕಳೆದ ಎರಡು ವರ್ಷಗಳಿಂದ ಸರಿಯಾಗಿ ವೇತನ ಪಾವತಿಯಾಗದೆ ಇರುವುದು ಹಾಗೂ ಕೆಲವು ಸೌಲಭ್ಯಗಳನ್ನು ನೀಡದೆ ಇರುವುದನ್ನು ಖಂಡಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ.
ಕೊಡಗು ಜಿಲ್ಲೆಯ ಮಡಿಕೇರಿ ನಗರದ ಜಿಲ್ಲಾಸ್ಪತ್ರೆ, ವಿರಾಜಪೇಟೆ ಮತ್ತು ಸೋಮವಾರಪೇಟೆ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರವಿದ್ದು, ಮುಷ್ಕರದಿಂದ ರೋಗಿಗಳು ಪರದಾಡುವ ಪರಿಸ್ಥಿತಿ ಉದ್ಭವಿಸಿದೆ. ರಾಜ್ಯವ್ಯಾಪಿ ಒಟ್ಟು 167 ಡಯಾಲಿಸಿಸ್ ಕೇಂದ್ರಗಳಿದ್ದು, 1 ಸಾವಿರಕ್ಕೂ ಅಧಿಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಇವರಿಗೆ ವೇತನ ನೀಡದೆ ಆಡಳಿತ ವ್ಯವಸ್ಥೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಕಾರ್ಮಿಕರ ಸಂಖ್ಯೆಯೇ ಅಧಿಕವಿದ್ದು, ಖಾಸಗಿಯಾಗಿ ಹಣ ಖರ್ಚು ಮಾಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಇವರಿಂದ ಸಾಧ್ಯವಿಲ್ಲ. ಕಾರ್ಮಿಕರು ಹಾಗೂ ಬಡ ಜನರು ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸಿರುವುದರಿಂದ ತಕ್ಷಣ ಸಂಬಂಧಪಟ್ಟ ಸಚಿವರು ಡಯಾಲಿಸಿಸ್ ಕೇಂದ್ರದ ನೌಕರರ ಅಹವಾಲನ್ನು ಸ್ವೀಕರಿಸಿ ಸಕಾಲದಲ್ಲಿ ವೇತನ ನೀಡಲು ಕ್ರಮ ಕೈಗೊಳ್ಳಬೇಕು. ಗುತ್ತಿಗೆ ಆಧಾರದ ನೌಕರರನ್ನು ಖಾಯಂಗೊಳಿಸಬೇಕು. ಡಯಾಲಿಸಿಸ್ ಕೇಂದ್ರದಲ್ಲಿರುವ ಅವ್ಯವಸ್ಥೆಗಳನ್ನು ಸರಿಪಡಿಸಿ ರೋಗಿಗಳಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
::: ಸೋಮವಾರಪೇಟೆಯಲ್ಲಿ ಅವ್ಯವಸ್ಥೆ :::
ಸೋಮವಾರಪೇಟೆ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರ ಅವ್ಯವಸ್ಥೆ ಮತ್ತು ಅಶುಚಿತ್ವದಿಂದ ಕೂಡಿದ್ದು, ರೋಗಿಗಳು ಉತ್ತಮ ವಾತಾವರಣದಲ್ಲಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪ್ರಸ್ತುತ ತಂತ್ರಜ್ಞಾನ ಮೇಲ್ದರ್ಜೆಗೆ ಏರಿದ್ದರೂ ಕೇಂದ್ರದಲ್ಲಿ ತುಕ್ಕು ಹಿಡಿದ ಮಂಚಗಳನ್ನು ಬಳಸಲಾಗುತ್ತಿದೆ ಎಂದು ಸೋಮಪ್ಪ ಆರೋಪಿಸಿದ್ದಾರೆ.
ಡಯಾಲಿಸಿಸ್ ಕೇಂದ್ರದ ಅವ್ಯವಸ್ಥೆಗಳನ್ನು ಸರಿಪಡಿಸಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಬೇಕು. ಆ ಮೂಲಕ ರೋಗಿಗಳಿಗೆ ಉತ್ತಮ ವಾತಾವರಣವನ್ನು ಸೃಷ್ಟಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
Breaking News
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*