ಮಡಿಕೇರಿ ಆ.2 : ಇದೇ ಆಗಸ್ಟ್, 15 ರಂದು ಸಂಭ್ರಮ ಮತ್ತು ಸಡಗರದೊಂದಿಗೆ ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್‍ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಳೆದ ಬಾರಿಯಂತೆ ನಗರದ ಕೋಟೆ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧರಿಸಲಾಯಿತು.
ಸ್ವಾಗತ, ಧ್ವಜಾರೋಹಣ, ವೇದಿಕೆ, ಕವಾಯತು, ಉಪಾಹಾರ, ಭಾಷಣ, ಬಹುಮಾನ ಹೀಗೆ ವಿವಿಧ ಉಪ ಸಮಿತಿಗಳು ಕಳೆದ ಬಾರಿಯಂತೆ ತಮ್ಮ ಕೆಲಸಗಳನ್ನು ಚಾಚುತಪ್ಪದೆ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು.
ಸ್ವಾಗತ ಸಮಿತಿಯವರು ಶಿಷ್ಟಾಚಾರದಂತೆ ಆಹ್ವಾನ ಪತ್ರ ತಲುಪಿಸುವುದು ಮತ್ತಿತರ ಕಾರ್ಯವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಹೇಳಿದರು.
ಧ್ವಜಾರೋಹಣ ಸಂಬಂಧ ಅಗತ್ಯ ತಯಾರಿ ಮಾಡಿಕೊಳ್ಳುವುದು, ವೇದಿಕೆ ಸಮಿತಿಯವರು ಕಳೆದ ಬಾರಿಯಂತೆ ವಾಟರ್ ಪ್ರೂಫ್ ಶಾಮಿಯಾನ ನಿರ್ಮಾಣ ಮಾಡುವುದು ಮತ್ತಿತರ ಕಾರ್ಯ ಕೈಗೊಳ್ಳುವಂತೆ ಸೂಚಿಸಿದರು.
ಕವಾಯತನ್ನು ನಿಗಧಿತ ಸಮಯಕ್ಕೆ ಸರಿಯಾಗಿ ಆಯೋಜಿಸುವುದು, ರಿಹರ್ಸಲ್ ಮಾಡಿಕೊಳ್ಳುವಂತೆ ಸೂಚಿಸಿದರು. ವಿದ್ಯಾರ್ಥಿಗಳಿಗೆ ಬೆಳಗಿನ ಉಪಹಾರವನ್ನು ಸಂಬಂಧಪಟ್ಟ ಸಮಿತಿಯವರು ವ್ಯವಸ್ಥೆ ಮಾಡುವಂತೆ ತಿಳಿಸಿದರು.
ಸರ್ಕಾರದ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಗ್ಯಾರಂಟಿ ಯೋಜನೆಗಳು ಹಾಗೂ ಬಜೆಟ್‍ನಲ್ಲಿ ಕೊಡಗು ಜಿಲ್ಲೆಗೆ ಪ್ರಕಟಿಸಿರುವ ಕಾರ್ಯಕ್ರಮಗಳ ಬಗ್ಗೆ ಭಾಷಣ ತಯಾರಿಸುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವನ್ನು ಗೌರವಿಸುವುದು, ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಯೋಜಿಸಲು ಎಲ್ಲಾ ಅಧಿಕಾರಿಗಳು ಕಾರ್ಯ ನಿರ್ವಹಿಸುವಂತೆ ನಿರ್ದೇಶನ ನೀಡಿದರು.
ಸಭೆಯ ಆರಂಭದಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಳೆಗಾಲ ಆಗಿರುವುದರಿಂದ ಪ್ರತಿ ವರ್ಷ ನಗರದ ಕೋಟೆ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಡಿವೈಎಸ್‍ಪಿ ಜಗದೀಶ್ ಅವರು ಮಾತನಾಡಿ ಕವಾಯತು ಸಂಬಂಧಿಸಿದಂತೆ ಪೊಲೀಸ್, ಎನ್‍ಸಿಸಿ, ಅರಣ್ಯ, ಗೃಹರಕ್ಷಕ ದಳ ಹೀಗೆ ವಿವಿಧ ಕವಾಯತುಗಳು ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್ ಅವರು 14 ಶಾಲೆಗಳ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಳ್ಳಲಿವೆ. ಸ್ವಾತಂತ್ರ್ಯ ದಿನಾಚರಣೆಗೂ ಮೊದಲು ರಿಹರ್ಸಲ್ ನಡೆಯಲಿದ್ದು, ಆ ಸಂದರ್ಭದಲ್ಲಿ ಕುಡಿಯುವ ನೀರು ವ್ಯವಸ್ಥೆ ಮಾಡಬೇಕಿದೆ ಎಂದು ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಲೋಕೋಪಯೋಗಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಕ್ ಅವರು ಕೃಷಿ ಸಾಧಕರಿಗೆ ಸನ್ಮಾನಿಸಬಹುದು ಎಂದು ಮಾಹಿತಿ ನೀಡಿದರು. ಹಾಗೆಯೇ ವಿವಿಧ ಉಪ ಸಮಿತಿಗಳಲ್ಲಿ ಇರುವ ಇಲಾಖೆಗಳ ಹೆಸರು ಓದಿದರು. ತಹಶೀಲ್ದಾರ್ ಪ್ರವೀಣ್ ಕುಮಾರ್ ಅವರು ಗಣ್ಯರನ್ನು ಆಹ್ವಾನಿಸುವ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕೈಜೋಡಿಸಬೇಕು. ಗಣ್ಯರನ್ನು ಆಹ್ವಾನಿಸುವುದು ಸೇರಿದಂತೆ ಹಲವು ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಲಹೆ ಮಾಡಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*