ಮಡಿಕೇರಿ ಆ.2: 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಅನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ವತಿಯಿಂದ ನಡೆಸಲಾಗುವುದು.
2022-23 ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದಿನ ಸಾಲುಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಾತ್ರ ಈ ಪರೀಕ್ಷೆಗೆ ನೋಂದಾಯಿಸಲು ಅರ್ಹರಾಗಿದ್ದಾರೆ. ಫಲಿತಾಂಶ ತಿರಸ್ಕರಿಸಲು ಈ ಪರೀಕ್ಷೆಯಲ್ಲಿ ಅವಕಾಶವಿರುವುದಿಲ್ಲ. ಪರೀಕ್ಷೆ ಸಂಬಂಧಿಸಿದ ಸುತ್ತೋಲೆ ಹಾಗೂ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ https://kseab.karnataka.gov.in ಪ್ರಕಟಿಸಲಾಗಿದೆ. ಈ ಅವಕಾಶವನ್ನು ಅರ್ಹ ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.







