ಮಡಿಕೇರಿ ಆ.2 : ಕೊಡಗು ಜಿಲ್ಲಾ ಸರ್ವೋದಯ ಸಮಿತಿಯ ಸಭೆ ಸಮಿತಿಯ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದಲ್ಲಿ ನಡೆಯಿತು. ಗಾಂಧಿ ಸ್ಮಾರಕ ಭವನ ನಿರ್ಮಾಣ ಕಾರ್ಯದ ಕುರಿತು ಚರ್ಚಿಸಲಾಯಿತು.
ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಟಿ.ಪಿ.ರಮೇಶ್ ಅವರು ಪ್ರಾಸ್ತವಿಕವಾಗಿ ಮಾತನಾಡಿ, ಸರ್ವೋದಯ ಸಮಿತಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದ್ದು, ಜಿಲ್ಲೆಯಲ್ಲಿ ಗಾಂಧಿ ವಿಚಾರಧಾರೆಗಳ ಕುರಿತು ಬೆಳಕು ಚೆಲ್ಲುತ್ತಾ ಸಾಗಿರುವುದು ಶ್ಲಾಘನೀಯ ಎಂದರು.
ಗಾಂಧಿ ಮೈದಾನದ ಗಾಂಧಿ ಸ್ಮಾರಕ ಭವನದ ಕುರಿತು ಸಭೆಗೆ ಮಾಹಿತಿ ನೀಡಿದ ಅವರು ಸ್ಮಾರಕ ಭವನ ನಿರ್ಮಾಣಕ್ಕೆ ಸಕಾಲದಲ್ಲಿ ಸ್ಪಂದಿಸಿದ ಸರ್ಕಾರ ಈಗಾಗಲೇ ರೂ.50 ಲಕ್ಷ ಬಿಡುಗಡೆ ಮಾಡಿದೆ. ಇದು ಸರ್ವೋದಯ ಸಮಿತಿಯ ನಿರಂತರ ಕಾರ್ಯ ಚಟುವಟಿಕೆಯ ಫಲ ಎಂದು ತಿಳಿಸಿದರು.
ಸ್ಮಾರಕ ಭವನ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸುವ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚಿಸಲಾಗಿದ್ದು, ಕಾಮಗಾರಿ ಶೀಘ್ರ ಆರಂಭಗೊಳ್ಳಲಿದೆ ಎಂದು ರಮೇಶ್ ಹೇಳಿದರು.
ಸಭೆಯಲ್ಲಿ ಪ್ರಮುಖರಾದ ಕಾನೆಹಿತ್ಲು ಮೊಣ್ಣಪ್ಪ, ಕೆ.ಟಿ.ಬೇಬಿ ಮ್ಯಾಥ್ಯೂ, ಎಂ.ಎಂ.ಲಿಯಾಕತ್ ಆಲಿ, ಅಂಬೆಕಲ್ ನವೀನ್, ಟಿ.ಎಂ.ಮುದ್ದಯ್ಯ, ರೇವತಿ ರಮೇಶ್, ಪ್ರೇಮಾ ಕೃಷ್ಣಪ್ಪ, ಯಶೋಧ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್ ಸ್ವಾಗತಿಸಿದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*