ಸೋಮವಾರಪೇಟೆ ಆ.3 : ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಲ್ಲೂ ಮುಂದೆ ಇರಬೇಕು ಎಂದು ಮಡಿಕೇರಿ ಶಾಸಕ ಡಾ.ಮಂತರ್‍ಗೌಡ ಹೇಳಿದರು.
ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ನಡೆದ ಬಿಟಿಸಿಜಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡಾಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅತೀ ಬುದ್ದಿವಂತರು ಮಾತ್ರ ಉನ್ನತ ಹುದ್ದೆಯನ್ನು ಪಡೆಯಲು ಸಾಧ್ಯ ಎಂಬ ಭ್ರಮೆ ಯಾರಿಗೂ ಬೇಡ, ನಾನು ಕೂಡ ಎವರೆಜ್ ಸ್ಟೂಡೆಂಟ್ ಆಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಉನ್ನತ ವ್ಯಾಸಂಗ ಮಾಡಿದ್ದೇನೆ. ಆದ್ದರಿಂದ ಯಾರಿಗೂ ಕೀಳರಿಮೆ ಬೇಡ, ನಿರಂತರ ಕಲಿಕೆಯಿಂದ ಸಾಧನೆ ಮಾಡಬಹುದು ಎಂದು ಹೇಳಿದರು.
ಗ್ರಾಮೀಣ ಮಕ್ಕಳಿಗೂ ಉನ್ನತ ಶಿಕ್ಷಣ ಸಿಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕಾಗಿದೆ. ಆರ್ಥಿಕ ಸಮಸ್ಯೆಯಿಂದ ಯಾವ ಮಕ್ಕಳ ವಿದ್ಯಾಭ್ಯಾಸ ನಿಲ್ಲಬಾರದು, ಇಂತಹ ಸಂಕಷ್ಟದ ಸಮಯದಲ್ಲಿ ಬಡಕುಟುಂಬದ ಮಕ್ಕಳಿಗೆ ಆರ್ಥಿಕ ಸಹಾಯ ಮಾಡುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯೂ ಕೂಡ ಎಂದು ಆಶಿಸಿದರು.
ಕ್ಷೇತ್ರಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಮಾತನಾಡಿ, ವಿದ್ಯಾರ್ಥಿ ಜೀವನ ಒಂದೇ ಬಾರಿ ಬರುವುದು. ವಿದ್ಯಾರ್ಥಿಗಳಿಗೂ ನೀತಿ ಸಂಹಿತೆ ಇದೆ. ಅದನ್ನು ಪರಿಪಾಲಿಸಲೇಬೇಕು. ಯಶಸ್ಸಿನ ತತ್ವಗಳನ್ನು ಪ್ರತಿದಿನ ಕಲಿಯಬೇಕು. ಮನೋಭಾವನೆಯೇ ಸರ್ವಸ್ವ, ವಿದ್ಯಾರ್ಥಿಗಳಲ್ಲಿ ಸಮತೋಲನ ವ್ಯಕಿತ್ವ ನಿರ್ಮಾಣ ಆಗಬೇಕಿದೆ. ಬಸವಣ್ಣ, ಗಾಂಧೀಜಿ,ಅಂಬೇಡ್ಕರ್ ಸೇರಿದಂತೆ ದಾರ್ಶನಿಕರ ಉಪದೇಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಗುರುಗಳು ಹೇಳಿಕೊಟ್ಟ ಪಾಠಗಳನ್ನು ಶ್ರದ್ಧೆಯಿಂದ ಕೇಳಿ, ಮನನ ಮಾಡಿಕೊಂಡರೆ ಉತ್ತಮ ಅಂಕಗಳನ್ನು ಪಡೆಯಬಹುದು ಎಂದು ಕಿವಿಮಾತು ಹೇಳಿದರು.
ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಮಾತನಾಡಿ, ಗ್ರಾಮೀಣ ಭಾಗದ ರೈತರ ಮಕ್ಕಳಿಗೂ ಗುಣಮಟ್ಟದ ಹಾಗು ಆಂಗ್ಲ ಮಾಧ್ಯಮದ ಶಿಕ್ಷಣ ನೀಡಲೇಬೇಕೆಂಬ ಸದುದ್ದೇಶದಿಂದ ಕುವೆಂಪು ವಿದ್ಯಾಸಂಸ್ಥೆಯನ್ನು ಕಟ್ಟಿದ್ದೇವೆ. ಹತ್ತನೆ ತರಗತಿಯಲ್ಲಿ ಸತತ ಆರನೇ ಬಾರಿ ಶೇ.100ರ ಫಲಿತಾಂಶವನ್ನು ಶಾಲೆ ಪಡೆದಿದೆ. ಈ ವರ್ಷದಿಂದ ಪಿಯುಸಿಯಲ್ಲಿ ವಿಜ್ಞಾನ ವಿಭಾಗವನ್ನು ತೆರೆದಿದ್ದೇವೆ. ನೀಟ್, ಸಿ.ಇ.ಟಿ ತರಬೇತಿ ತರಗತಿಗಳನ್ನು ಪ್ರಾರಂಭ ಮಾಡಿದ್ದೇವೆ ಎಂದು ಹೇಳಿದರು.
ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ಗಣಪತಿ, ವಿದ್ಯಾಸಂಸ್ಥೆಯ ಭಾತ್ಮೀದಾರ ಕೆ.ಎಂ.ಜಗದೀಶ್, ಲಿಂಗರಾಜು, ಕೆ.ಟಿ.ಪರಮೇಶ್, ನಂದಕುಮಾರ್, ಒಕ್ಕಲಿಗರ ಯುವವೇದಿಕೆ ಅಧ್ಯಕ್ಷ ಕೆ.ಬಿ.ಸುರೇಶ್, ಹಾಗು ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳು, ಮುಖ್ಯ ಶಿಕ್ಷಕಿ ಮಿಲ್‍ಗ್ರೆಡ್ ಗೋನ್ಸಾಲ್ವೆಸ್, ಕಾಲೇಜು ವಿದ್ಯಾರ್ಥಿ ನಾಯಕಿ ವೈ.ಎಸ್.ಧನ್ಯ ಇದ್ದರು.
ಕಾಲೇಜು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ವಿಜ್ಞಾನ ಪ್ರಯೋಗಾಲಯ ಹಾಗೂ ನೀಟ್ ಮತ್ತು ಸಿ.ಇ.ಟಿ. ತರಬೇತಿ ತರಗತಿಗೆ ಶಾಸಕರು ಚಾಲನೆ ನೀಡಿದರು.
Breaking News
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*
- *ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*