ನವದೆಹಲಿ ಆ.3 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.
ಸಂಸತ್ ಭವನಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಈ ವೇಳೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮೋದಿಯವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ ಧರಿಸಿ, ಅಂಬಾರಿ ಕೊಟ್ಟು ಸನ್ಮಾಸಿದರು.
ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾದರು.