ಮಡಿಕೇರಿ, ಆ.3 : ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ, ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡಿಕೊಂಡು
ಸೊಳ್ಳೆಗಳ ನಿಯಂತ್ರಣ ಮಾಡುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾಧ್ಯ ಎಂದು
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಕೆ.ಎಂ.ಸತೀಶ್ ಕುಮಾರ್ ಹೇಳಿದರು.
ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ, ಮಲೇರಿಯಾ ಮತ್ತು ಚಿಕೂನ್‌ಗುನ್ಯಾ ರೋಗ ಹರಡುವಿಕೆ, ನಿಯಂತ್ರಣ ಕುರಿತು ಮಡಿಕೇರಿ ನಗರದ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ
ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಮಡಿಕೇರಿ ತಾಲ್ಲೂಕಿನ
ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಏರ್ಪಡಿಸಿದ್ದ ಅಡ್ವೊಕೆಸಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ತಮ್ಮ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ, ಆರೋಗ್ಯ ಮತ್ತು ನೈರ್ಮಲ್ಯದ ಕುರಿತು
ಮಕ್ಕಳು ಹಾಗೂ ಸಮುದಾಯದಲ್ಲಿ ಅರಿವು ಮೂಡಿಸುವ ಮೂಲಕ ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗೃತಿ ಮೂಡಿಸಬೇಕು ಎಂದರು.
ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡರೆ ಎಲ್ಲಾ ರೋಗಗಳನ್ನು ತಡೆಗಟ್ಟಲು ಸಾಧ್ಯ ಎಂದು ಡಾ ಸತೀಶ್ ಕುಮಾರ್ ಹೇಳಿದರು.
ರೋಗವಾಹಕ ಆಶ್ರಿತ ರೋಗಗಳ ಹರಡುವಿಕೆ ಮತ್ತು ನಿಯಂತ್ರಣ ಕ್ರಮಗಳ ಕುರಿತು ಸ್ಲೈಡ್ಸ್ ಪ್ರದರ್ಶನದ ಮೂಲಕ ಮಾಹಿತಿ ನೀಡಿದ ಜಿಲ್ಲಾ ರೋಗವಾಹಕ ಆಶ್ರಿತಾ ರೋಗಗಳ ನಿಯಂತ್ರಣಾಧಿಕಾರಿ ಡಾ|ಬಿ.ಎಲ್. ಶ್ರೀನಿವಾಸ್, ಡೆಂಗ್ಯೂ, ಮಲೇರಿಯಾ, ಚಿಕುನ್ ಗುನ್ಯ ರೋಗಗಳು ಹರಡುವ ಕ್ರಮ ಮತ್ತು ಇವುಗಳನ್ನು ತಡೆಗಟ್ಟುವ ವಿಧಾನ ಕ್ರಮಗಳ ಬಗ್ಗೆ ಅವರು ವಿವರಿಸಿದರು.
ಸೊಳ್ಳೆಗಳ ಆಶ್ರಯ ತಾಣ ಗಳನ್ನು ನಿರ್ಮೂಲನೆ ಮಾಡುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಎಂದರು.
ರೋಗವಾಹಕಗಳ ನಿಯಂತ್ರಣ ಕುರಿತ ಕೈಪಿಡಿ ಬಿಡುಗಡೆಗೊಳಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ಈ ಉಪಯುಕ್ತ ಆರೋಗ್ಯ ಮಾಹಿತಿಯಿಂದ
ಶಿಕ್ಷಕರು ಮಕ್ಕಳಿಗೆ ಸಾಂಕ್ರಾಮಿಕ ರೋಗ ಹರಡುವ ಎಚ್ಚರಿಕೆ ಹಾಗೂ ಇವುಗಳನ್ನು ತಡೆಗಟ್ಟಲು ಕೈಗೊಳ್ಳುವ ಕುರಿತು ಅವರಲ್ಲಿ ಆರೋಗ್ಯ ಅರಿವು ಮೂಡಿಸಬೇಕು ಎಂದರು.
ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಹಾಗೂ ಮುಂಜಾಗ್ರತೆ ಕುರಿತು ಸ್ಲೈಡ್ಸ್ ಗಳ ಮೂಲಕ
ಮಾಹಿತಿ ನೀಡಿದ
ಮಡಿಕೇರಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ|| ಎಂ.ಯು.ಚೇತನ್ , ಸೊಳ್ಳೆಗಳ ನಿಯಂತ್ರಣ ಅತಿ ಮುಖ್ಯವಾಗಿದ್ದು, ಮನೆ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಟೈರುಗಳು, ತೆಂಗಿನ ಚಿಪ್ಪುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು.ಮನೆಯ ನೀರಿನ ಮೂಲಗಳನ್ನು ಸೊಳ್ಳೆ ಪ್ರವೇಶಿಸದಂತೆ ಕ್ರಮವಹಿಸಬೇಕು ಎಂದರು.
ಶಾಲೆಗಳಲ್ಲಿ ಆರೋಗ್ಯ ಅಭಿಯಾನ ಹಾಗೂ ಸಾಂಕ್ರಾಮಿಕ ರೋಗಗಳ ತಡೆಗಟ್ಟಲು ಸಮುದಾಯದ ಸಹಭಾಗಿತ್ವ ಕುರಿತು ಮಾಹಿತಿ ನೀಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್,
ಆರೋಗ್ಯ ರಕ್ಷಣೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಕುರಿತು ಜಾಗೃತಿ ಮೂಡಿಸುವ ದಿಸೆಯಲ್ಲಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್.ಪಾಲಾಕ್ಷ , ಸ್ಲೈಡ್ಸ್ ಗಳ ಮೂಲಕ ಸೊಳ್ಳೆಗಳ ಹರಡುವಿಕೆ ಮತ್ತು
ಸೊಳ್ಳೆಗಳ ನಿಯಂತ್ರಣದ ಕುರಿತು ಹಾಗೂ ಕಾರ್ಯಾಗಾರದ ಸಂಯೋಜಕ ಜಿ.ಶ್ರೀಹರ್ಷ ಆರೋಗ್ಯ ರಕ್ಷಣೆ ಕುರಿತು
ಮಾಹಿತಿ ನೀಡಿದರು.
ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ , ಸಮುದಾಯ ಆರೋಗ್ಯಾಧಿಕಾರಿ
ಕಲ್ಮೇಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಸಿ.ಆರ್.ಲೋಕೇಶ್, ಸಂಘದ ತಾಲ್ಲೂಕು ಘಟಕದ ಕಾರ್ಯದರ್ಶಿ ಐ.ಜೆ.ಜೆನೆಟ್, ಸುಂಟಿಕೊಪ್ಪ ಸ್ವಸ್ಥ ಸಂಸ್ಥೆಯ ಮುರುಗೇಶ್ ಇದ್ದರು.
ಮಡಿಕೇರಿ ತಾಲ್ಲೂಕಿನ ಪ್ರೌಢಶಾಲಾ ವಿಜ್ಞಾನ ಶಿಕ್ಷಕರು ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*