ಮಡಿಕೇರಿ ಆ.3 : ಚೆಟ್ಟಳ್ಳಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘವು 2022-23ನೇ ಸಾಲಿನಲ್ಲಿ ಒಟ್ಟು ರೂ.2764.77 ಲಕ್ಷಗಳ ವಹಿವಾಟು ನಡೆಸುವ ಮೂಲಕ ರೂ.53.42 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದಸ್ಯರಿಗೆ ಶೇ.15ರಂತೆ ಡಿವಿಡೆಂಟ್ ನೀಡಲಾಗುವುದು ಎಂದರು.
ಸಂಘದಲ್ಲಿ 2022-23ನೇ ಸಾಲಿನ ಒಟ್ಟು ‘ಎ’ ತರಗತಿಯ 1138 ಸದಸ್ಯರಿದ್ದು, ಸದಸ್ಯರಿಂದ ಪಾಲು ಬಂಡವಾಳವಾಗಿ ರೂ.121.64 ಲಕ್ಷಗಳಿರುತ್ತದೆ. ಕ್ಷೇಮ ನಿಧಿ ಸೇರಿ ಇತರೆ ನಿಧಿಗಳು ರೂ.273.03 ಲಕ್ಷ ಹಾಗೂ ನಿರುಖು ಠೇವಣಿ, ಸಂಚಯ ಠೇವಣಿ ಹಾಗೂ ಇತರೆ ಠೇವಣಿ ಸೇರಿ ಒಟ್ಟು ರೂ.1410.33 ಲಕ್ಷಗಳಿರುತ್ತದೆ. ಸಂಘದ ಬಂಡವಾಳವನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಪಾಲು ಹಣ, ಕ್ಷೇಮ ನಿಧಿ ಹಾಗೂ ನಿರುಖು ಠೇವಣಿಯಲ್ಲಿ ಹಾಗೂ ಇತರೆ ಸಹಕಾರ ಸಂಸ್ಥೆಯಲ್ಲಿ ಪಾಲು ಮತ್ತು ನಿರಖು ಠೇವಣಿ ರೂಪದಲ್ಲಿ ಒಟ್ಟು ರೂ.485.37 ಲಕ್ಷಗಳನ್ನು ಠೇವಣಿ ಮಾಡಲಾಗಿದೆ ಎಂದು ತಿಳಿಸಿದರು.
ಸದಸ್ಯರ ಅವಶ್ಯಕತೆಗನುಗುಣವಾಗಿ ಕೆ.ಸಿ.ಸಿ ಫಸಲು ಸಾಲ ಸೇರಿ 2022-23ನೇ ಸಾಲಿನಲ್ಲಿ ರೂ.1738.28 ಲಕ್ಷಗಳ ಸಾಲ ವಿತರಿಸಲಾಗಿದೆ ಎಂದರು. ಸಂಘವು ಎಂ.ಸಿ.ಎಫ್ ಮದ್ರಾಸ್ ಫರ್ಟಿಲೈಸರ್ಸ್, ಇಂಡಿಯನ್ ಪೊಟ್ಯಾಷ್ ಇಫ್ಕೊ, ಫ್ಯಾಕ್ಟ್, ಫ್ಯೂಚರ್ ಫರ್ಟಿಲೈಸರ್ಸ್, ಜುವಾರಿ, ಕೋರಮಂಡಲ್ ಸ್ಟೇನ್ಸ್ ಸಂಸ್ಥೆಗಳ ಸಗಟು ಮತ್ತು ರಿಟೇಲ್ ಲೈಸನ್ಸ್ ಹೊಂದಿದ್ದು, ನೇರವಾಗಿ ರಸಗೊಬ್ಬರ ಖರೀದಿಸಿ ಸ್ಪರ್ಧಾತ್ಮಕ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಅಲ್ಲದೆ 2022-23ನೇ ಸಾಲಿನಲ್ಲಿ ಸದಸ್ಯರು ಹಾಗೂ ಗ್ರಾಹಕರಿಗೆ ಬೇಕಾದ ರಸಗೊಬ್ಬರ, ಹತ್ಯಾರು, ಸಿಮೆಂಟ್ ಹಾಗೂ ಇತರೆ ಅಗತ್ಯ ಸಮಾಗ್ರಿ ಬಾಪ್ತು ರೂ.541.94 ಲಕ್ಷಗಳ ವಹಿವಾಟು ಮೂಲಕ ರೂ.17.14 ಲಕ್ಷಗಳ ವ್ಯಾಪಾರ ಲಾಭಗಳಿಸಿದೆ ಎಂದು ಮಾಹಿತಿ ನೀಡಿದರು.
ಸಂಘದ ಮುಖ್ಯ ಕಚೇರಿ ಕೆಳಭಾಗದ ಅಂತಸ್ತಿನ ಮುಂಭಾಗ ಹೊಸದಾಗಿ ಬೋರ್ವೆಲ್ ತೆಗೆದು ಸಾರ್ವಜನಿಕರಿಗೆ ಶುದ್ಧನೀರಿನ ಘಟಕವನ್ನು ಸ್ಥಾಪಿಸಲಾಗಿದೆ. ರೈತ ಸದಸ್ಯರಿಗೆ ಅನುಕೂಲವಾಗುವಂತೆ ಕಾಫಿ ಗುಣಮಟ್ಟ ಪರಿಶೀಲನಾ ಯಂತ್ರವನ್ನು ಇಡಲಾಗಿದೆ. ಅಲ್ಲದೆ ಮಣ್ಣು ಪರೀಕ್ಷಾ ಕೇಂದ್ರವನ್ನು ತೆರೆದಿದ್ದು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಸಂಘದ ಮುಖ್ಯ ಕಚೇರಿ ಕಟ್ಟಡದ ಮೇಲ್ಭಾಗದಲ್ಲಿ ಪುಣ್ಯಕೋಟಿ ಅತಿಥಿಗೃಹ ನಿರ್ಮಿಸಿದ್ದು, ಆಸಕ್ತರು ವ್ಯಾಪಾರ ಮಳಿಗೆಯನ್ನು ಮುಂಗಡವಾಗಿ ಕಾಯ್ದಿರಿಸಬಹುದು ಎಂದ ಅವರು, ಇದೀಗ ಇ-ಸ್ಟ್ಯಾಂಪ್ ಸೌಲಭ್ಯ ನೀಡಲಾಗುತ್ತಿದೆ ಎಂದರು.
::: ನಷ್ಟದಿಂದ ಲಾಭದೆಡೆಗೆ :::
ಕಳೆದ 17 ವರ್ಷಗಳಿಂದ ಚೆಟ್ಟಳ್ಳಿ ಸಹಕಾರ ಸಂಘದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸುತ್ತಿದ್ದು, ನಾನು ಅಧಿಕಾರ ವಹಿಸಿಕೊಳ್ಳುವಾಗ 4.70 ಲಕ್ಷ ರೂ. ನಷ್ಟದಲ್ಲಿದ್ದ ಸಂಘ ಇಂದು 53.42 ಲಕ್ಷ ರೂ. ಲಾಭ ಗಳಿಸುವಷ್ಟು ಮಟ್ಟಕ್ಕೆ ಬೆಳೆದಿದೆ. 420 ಇದ್ದ ಸದಸ್ಯ ಬಲ ಇಂದು 1138 ಕ್ಕೆ ಏರಿಕೆಯಾಗಿದ್ದು, ಸಂಘಕ್ಕೆ ಆದಾಯ ತಂದುಕೊಡುವ ಎಲ್ಲಾ ಸೌಲಭ್ಯಗಳನ್ನು ಮಾಡಲಾಗಿದೆ. ನನ್ನ ಸಾಧನೆ ತೃಪ್ತಿ ತಂದಿದೆ ಎಂದು ಮಣಿಉತ್ತಪ್ಪ ಹೇಳಿದರು.
::: ಆ.6 ರಂದು ಮಹಾಸಭೆ :::
ಆ.6 ರಂದು ಸಂಘದ 46ನೇ ಮಹಾಸಭೆಯು ಶ್ರೀ ನರೇಂದ್ರಮೋದಿ ಭವನದಲ್ಲಿ ನಡೆಯಲಿದ್ದು, ಸದಸ್ಯರುಗಳು ತಪ್ಪದೆ ಸಭೆಗೆ ಹಾಜರಾಗುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಕಣಜಾಲು ಕೆ.ಪೂವಯ್ಯ, ನಿರ್ದೇಶಕರಾದ ಬಟ್ಟೀರ ಕೆ.ಅಪ್ಪಣ್ಣ, ಟಿ.ಎಸ್.ಧನಂಜಯ, ಪುತ್ತರೀರ ಪಿ.ನಂಜಪ್ಪ, ಹಾಗೂ ನೂಜಿಬೈಲು ಡಿ.ನಾಣಯ್ಯ ಉಪಸ್ಥಿತರಿದ್ದರು.
Breaking News
- *ಹೊಸ್ಕೇರಿಬೆಟ್ಟ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ*
- *ಕೊಡಗು : ಸಹಕಾರ ಸಂಘಗಳ ಸುಸ್ಥಿರತೆಗೆ ಎಲ್ಲರೂ ಶ್ರಮಿಸಿ : ಕೆ.ಎನ್.ರಾಜಣ್ಣ ಸಲಹೆ*
- *ಮಡಿಕೇರಿಯಲ್ಲಿ ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ : ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*