ಮಡಿಕೇರಿ ಆ.3 : ಡಾ.ಕಸ್ತೂರಿ ರಂಗನ್ ವರದಿಯ ಸಾಧಕ, ಬಾಧಕಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಆ.11 ರಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುವ ಸೇನೆ ವತಿಯಿಂದ ಜಿಲ್ಲೆಯಲ್ಲಿ ವಿಚಾರಗೋಷ್ಠಿ ನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ಅಥವಾ ಸಿದ್ದಾಪುರದಲ್ಲಿ ವಿಚಾರಗೋಷ್ಠಿ ಮತ್ತು ಸಂವಾದವನ್ನು ಆಯೋಜಿಸಲಾಗುವುದು. ಗೋಷ್ಠಿಯಲ್ಲಿ ಪರಿಸರ ತಜ್ಞರು, ಸಂಪನ್ಮೂಲ ವ್ಯಕ್ತಿಗಳು ಹಾಗೂ ಮಲೆನಾಡು ಪ್ರದೇಶದ ಎಲ್ಲಾ ಜಿಲ್ಲೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಪರಿಸರವನ್ನು ಕಾಪಾಡುವ ಕಾರಣ ನೀಡಿ ಸೂಕ್ಷ್ಮ ವಲಯ ಎಂದು ಘೋಷಿಸಲು ಕಸ್ತೂರಿ ರಂಗನ್ 2013 ಏಪ್ರಿಲ್ 15 ರಂದು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವರದಿಯು ಅವೈಜ್ಞಾನಿಕವಾಗಿದ್ದು, ಇದು ರೈತರಿಗೆ ಮಾರಕವಾಗಿದೆ. ಮಲೆನಾಡು ಪ್ರದೇಶದಲ್ಲಿ ವಾಸಿಸುತ್ತಿರುವ ರೈತರು, ಕಾರ್ಮಿಕರು, ಆದಿವಾಸಿ ಬುಡಕಟ್ಟು ಜನರ ಬದುಕು ಮತ್ತು ಮೂಲಭೂತ ಹಕ್ಕನ್ನು ಕಸಿದುಕೊಳ್ಳುವ ವರದಿಯಾಗಿದೆ. ಇದನ್ನು ಈ ಹಿಂದೆ ಕಾಂಗ್ರೆಸ್ ಮತ್ತು ಇತರ ಸರ್ಕಾರಗಳು ತಿರಸ್ಕರಿಸಿದ್ದು, ಪ್ರಸ್ತುತ ಸರ್ಕಾರ ಕೂಡ ಇದೇ ನಿರ್ಧಾರಕ್ಕೆ ಬದ್ಧವಾಗಿರಬೇಕೆಂದು ಒತ್ತಾಯಿಸಿದರು.
ಹಲವು ಅವೈಜ್ಞಾನಿಕ ರೂಪದ ಅಭಿವೃದ್ಧಿ ಕಾಮಗಾರಿಗಳ ಕಾರಣಗಳಿಂದ ಪರಿಸರದಲ್ಲಿ ಅಸಮತೋಲನ ಉಂಟಾಗಿದ್ದು, ಇದನ್ನು ತಡೆಗಟ್ಟದೆ ಮಲೆನಾಡು ಪ್ರದೇಶದ ಜನರ ಬದುಕನ್ನು ಕಸಿದುಕೊಳ್ಳುವುದರಲ್ಲಿ ಏನು ಅರ್ಥವಿದೆ ಎಂದು ಪ್ರಶ್ನಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಸಂಭವಿಸುತ್ತಿರುವ ಪ್ರಾಕೃತಿಕ ವಿಕೋಪದಿಂದ ಜನ ಜೀವನ ಅಸ್ತವ್ಯಸ್ತಗೊಂಡು, ಬೆಳೆ ಹಾಗೂ ಜಮೀನು ಹಾನಿಯಾಗಿ ರೈತರು ಸಾಲದಲ್ಲಿ ಸಿಲುಕಿದ್ದಾರೆ. ಕಳೆದ 20 ವರ್ಷಗಳಿಂದ ಮಾನವ ಮತ್ತು ವನ್ಯಪ್ರಾಣಿ ಸಂಘರ್ಷದಿಂದ ಪ್ರಾಣ ಹಾನಿ ಹಾಗೂ ಅಧಿಕ ಪ್ರಮಾಣದ ಬೆಳೆ ನಷ್ಟವಾಗಿದೆ.
ಇಂತಹ ಸಂದರ್ಭದಲ್ಲಿ ಕಸ್ತೂರಿ ರಂಗನ್ ವರದಿಯ ಪ್ರಸ್ತಾಪ ರೈತರ ಪಾಲಿಗೆ ಮಾರಕವಾಗಿದೆ. ಅರಣ್ಯ ಪ್ರದೇಶವಾದ ಬ್ರಹ್ಮಗಿರಿ, ಪುಷ್ಪಗಿರಿ, ನಾಗರಹೊಳೆ, ತಲಕಾವೇರಿ ಮೀಸಲು ಅರಣ್ಯ, ವನ್ಯಜೀವಿ ಅರಣ್ಯ, ಟೈಗರ್ ಕಾರಿಡಾರ್, ಆನೆ ಕಾರಿಡಾರ್ ಎಂಬ ವರ್ಗೀಕರಣದಿಂದ ರೂಪಿಸಿರುವ ಕಾನೂನುಗಳಿಂದ ಪಶ್ಚಿಮಘಟ್ಟ ಮತ್ತು ಪರಿಸರವನ್ನು ಕಾಪಾಡಲು ಸಾಧ್ಯವಿಲ್ಲ. ಆದ್ದರಿಂದ ಇಎಸ್‍ಎ ಬಫರ್ ವಲಯ ವರ್ಗೀಕರಣವನ್ನು ಸಂಪೂರ್ಣವಾಗಿ ಕೈ ಬಿಡುವಂತೆ ಕರ್ನಾಟಕ ಸರಕಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಮಾರ್ಪಾಡುಗಳನ್ನ ಮಾಡಬೇಕು ಎಂದು ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಮನುಸೋಮಯ್ಯ ಮಾತನಾಡಿ, ಗ್ರಾಮೀಣ ಪ್ರದೇಶಕ್ಕೆ ಇಎಸ್‍ಎ ಬಫರ್ ವಲಯ ಎಂಬುವುದನ್ನು ಕೈಬಿಟ್ಟು, ಅರಣ್ಯ ಪ್ರದೇಶಕ್ಕೆ ಮಾತ್ರ ಸೀಮಿತಗೊಳಿಸಬೇಕು. ಇದರಿಂದ ರೈತಾಪಿ ವರ್ಗಕ್ಕೆ ಪೂರ್ಣ ಸ್ವತಂತ್ರದೊರಕಲಿದೆ ಎಂದರು.
ಜನರು ವಾಸವಿರುವ ಗ್ರಾಮಗಳನ್ನು ಮತ್ತು ರೈತರ ಹೊಲ, ಗದ್ದೆ, ತೋಟಗಳನ್ನು ಸೂಕ್ಷ್ಮ ವಲಯವೆಂದು ವರದಿಯಲ್ಲಿ ಘೋಷಿಸಿರುವುದನ್ನು ಕೇರಳ ರಾಜ್ಯ ಕೈ ಬಿಟ್ಟ ಮಾದರಿಯಲ್ಲೇ ಕರ್ನಾಟಕದಲ್ಲೂ ಕೈ ಬೀಡುವಂತೆ ಒತ್ತಾಯಿಸಿದರು.
ಒಂದು ವೇಳೆ ಜನರ ಭಾವನೆಗೆ ವಿರುದ್ಧವಾಗಿ ಸರ್ಕಾರ ನಡೆದುಕೊಂಡರೆ ಮಲೆನಾಡು ಪ್ರದೇಶದ ರೈತರು ಒಗ್ಗೂಡಿ ದೊಡ್ಡಮಟ್ಟದ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಜಯ್ ಬೋಪಯ್ಯ, ಸಂಚಾಲಕ ಸುಭಾಷ್ ಸುಬ್ಬಯ್ಯ, ಅಮ್ಮತ್ತಿ ಹೋಬಳಿ ಅಧ್ಯಕ್ಷ ಪ್ರವೀಣ್ ಬೋಪಯ್ಯ ಹಾಗೂ ಮೈಸೂರು ಜಿಲ್ಲಾ ಕಾರ್ಯದರ್ಶಿ ಹೊಸಕೋಟೆ ಬಸವರಾಜ್ ಉಪಸ್ಥಿತರಿದ್ದರು.
Breaking News
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*
- *ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*
- *ಕರ್ನಾಟಕ ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ*
- *ಮಿಸ್ಟಿ ಹಿಲ್ಸ್ ನಿಂದ ಮಕ್ಕಳಿಗೆ ಸಾಹಸಕ್ರೀಡೆ*
- *ವಿಟಿಯು ರಾಜ್ಯಮಟ್ಟದ ಕಬಡ್ಡಿ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ*
- *ವೀರ ಸೇನಾನಿಗಳಿಗೆ ಅಗೌರವ : ಆಮ್ ಆದ್ಮಿ ಪಾರ್ಟಿ ಖಂಡನೆ*