ಮಡಿಕೇರಿ ಆ.3 : ಭಾರತ ಆಹಾರ ನಿಗಮದಲ್ಲಿ ಲಭ್ಯತೆಯನುಸಾರ ಆಗಸ್ಟ್-2023 ರ ಮಾಹೆಗೆ ಸಾರ್ವಜನಿಕ ವಿತರಣಾ ಪದ್ಧತಿಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಚೀಟಿದಾರರಿಗೆ ‘ಸಾರವರ್ಧಿತ’ (ಪೌಷ್ಟಿಕಾಂಶ) ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದ್ದು, ಸಾರ್ವಜನಿಕ ಪಡಿತರದಾರರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೇ ಸಾರವರ್ಧಿತ ಅಕ್ಕಿಯನ್ನು ಪಡೆದು ಸದುಪಯೋಗಿಸಿಕೊಳ್ಳಬೇಕೆಂದು ಸಾರ್ವಜನಿಕ ಪಡಿತರದಾರರಲ್ಲಿ ಆಹಾರ ಇಲಾಖೆ ಕೋರಿದೆ.
ಅಂತ್ಯೋದಯ ಪಡಿತರ ಚೀಟಿಗಳಿಗೆ (ಎಎವೈ) ಪ್ರತಿ ಪಡಿತರ ಚೀಟಿಗೆ ಅಕ್ಕಿ- 35 ಕೆ.ಜಿ ಉಚಿತ, ಪಿಹೆಚ್‍ಹೆಚ್ ಪಡಿತರ ಚೀಟಿಗಳಿಗೆ (ಬಿಪಿಎಲ್) (ಆದ್ಯತಾ) ಪ್ರತಿ ಸದಸ್ಯರಿಗೆ ಅಕ್ಕಿ-5 ಕೆ.ಜಿ. ಉಚಿತ, ಅಂತರ್ ನ್ಯಾಯಬೆಲೆ ಅಂಗಡಿ / ಅಂತರ್ ಜಿಲ್ಲೆ /ಅಂತರ್ ರಾಜ್ಯ ಪಡಿತರ ಚೀಟಿಗಳಿಗೆ ಪೋರ್ಟಬಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಜಿಲ್ಲೆಯ/ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*