ಮಡಿಕೇರಿ ಆ.3 : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಿಜೆಪಿ ನಾಯಕ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವರ್ತನೆ ಖಂಡನೀಯವೆಂದು ಕೆಪಿಸಿಸಿ ಸದಸ್ಯ ಹಾಗೂ ವಕ್ಫ್ ಬೋರ್ಡ್ ನ ಮಾಜಿ ಜಿಲ್ಲಾಧ್ಯಕ್ಷ ಕೆ.ಎ.ಯಾಕುಬ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು ದಲಿತ ನಾಯಕರೊಬ್ಬರನ್ನು ಅವಹೇಳನ ಮಾಡಿರುವ ರೀತಿಯನ್ನು ಗಮನಿಸಿದರೆ ಬಿಜೆಪಿ ಯಾವ ಮನೋಸ್ಥಿತಿಯನ್ನು ಅನುಸರಿಸುತ್ತಿದೆ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಟೀಕಿಸಿದ್ದಾರೆ.
ಬಿಜೆಪಿಗೆ ದಲಿತರ ಬಗ್ಗೆ ನೈಜ ಕಾಳಜಿ ಮತ್ತು ಗೌರವವಿದ್ದರೆ ಆರಗ ಜ್ಞಾನೇಂದ್ರ ಅವರನ್ನು ತಕ್ಷಣ ಪಕ್ಷದಿಂದ ಉಚ್ಚಾಟಿಸಬೇಕು ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಆರಗ ಜ್ಞಾನೇಂದ್ರ ಅವರು ಖರ್ಗೆ ಅವರ ಮೈಬಣ್ಣ ಮತ್ತು ಅವರು ಬಂದ ಪ್ರದೇಶದ ಜನರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಇದು ಅತ್ಯಂತ ಬೇಸರದ ವಿಚಾರ ಮತ್ತು ಇಡೀ ದಲಿತ ವರ್ಗಕ್ಕೆ ಮಾಡಿದ ಅಪಮಾನವಾಗಿದೆ. ದಲಿತ ನಾಯಕತ್ವ ಬೆಳೆಯುವುದನ್ನು ಬಿಜೆಪಿ ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಇದೇ ಕಾರಣಕ್ಕೆ ಪ್ರತಿ ಹಂತದಲ್ಲೂ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ಅದು ನಡೆದುಕೊಳ್ಳುತ್ತದೆ. ವರ್ಣಬೇಧ ನೀತಿಯ ವಿರುದ್ಧ ವಿಶ್ವ ಮಟ್ಟದಲ್ಲೇ ಹೋರಾಟಗಳು ನಡೆದಿದೆ. ಆದರೆ ಆರಗ ಜ್ಞಾನೇಂದ್ರ ಅವರಂತಹ ಬಿಜೆಪಿ ಮುಖಂಡರುಗಳು ಇಲ್ಲಿಯವರೆಗೆ ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವ ಮತ್ತು ದಲಿತ ನಾಯಕತ್ವವನ್ನು ಪ್ರೋತ್ಸಾಹಿಸುವ ಕೆಲಸವನ್ನು ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಆರಗ ಜ್ಞಾನೇಂದ್ರ ಅವರು ಕೂಡ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಬಹಿರಂಗ ಕ್ಷಮೆಯಾಚಿಸಬೇಕೆಂದು ಯಾಕುಬ್ ಆಗ್ರಹಿಸಿದ್ದಾರೆ.
::: ಮಣಿಪುರ ಘಟನೆ ಅಮಾನವೀಯ :::
ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಅಮಾನವೀಯ ಮತ್ತು ಖಂಡನೀಯವಾಗಿದೆ. ಮಹಿಳೆಯರನ್ನು ನಡೆಸಿಕೊಳ್ಳುತ್ತಿರುವ ರೀತಿ ಇಡೀ ಸಮಾಜ ತಲೆ ತಗ್ಗಿಸುವಂತ್ತಾಗಿದೆ. ಹಿಂಸಾಚಾರ ನಿಯಂತ್ರಿಸುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಅವರು, ಕೇಂದ್ರ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಅಮಾಯಕರಿಗೆ ಹಾಗೂ ಮಹಿಳೆಯರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*