ಮಡಿಕೇರಿ ಆ.4 : ಮುಖ್ಯಮಂತ್ರಿ ಯವರ ಕಾನೂನು ಸಲಹೆಗಾರರಾಗಿ ಅಧಿಕಾರ ಸ್ವೀಕರಿಸಿ ಕೊಡಗಿಗೆ ಆಗಮಿಸಿದ ಶಾಸಕ ಎ.ಎಸ್ ಪೊನ್ನಣ್ಣ ಅವರನ್ನು ಕೊಡಗಿನ ಗಡಿ ಆನೆಚೋಕೂರುಗೇಟ್ ಹಾಗೂ ಬಿಟ್ಟಂಗಾಲ , ವಿರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.
ಈ ಸಂದರ್ಭ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ , ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದರ ಜತೆಗೆ ಸರಕಾರದಿಂದ ದೊರಕುವ ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಮಿದೇರಿರಾ ನವೀನ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ರಾಜ್ಯ ವಕ್ತಾರ ಸಂಕೇತ್ ಪೂವಯ್ಯ, ಪಕ್ಷದ ಹಿರಿಯ ಮುಖಂಡರಾದ ವಾಸು ಕುಟಪ್ಪ, ಪಿ. ಕೆ. ಪೊನಪ್ಪ, ಮುಂತಾದ ಪಕ್ಷದ ವಿವಿಧ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು ,ಕಾರ್ಯಕರ್ತರು ಹಾಜರಿದ್ದರು.