ಬೆಂಗಳೂರು ಆ.4 : ಬೆಂಗಳೂರಿನ ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಜೆ.ಡಬ್ಲ್ಯೂ ಮ್ಯಾರಿಯೆಟ್ ಹೋಟೆಲ್ ನಲ್ಲಿ ನಡೆದ ಶಿಕ್ಷಣ ಕುರಿತ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಫಿ ಟೇಬಲ್ ಪುಸ್ತಕ ಬಿಡುಗಡೆಗೊಳಿಸಿದರು.
ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಶರಣಪ್ರಕಾಶ್ ಪಾಟೀಲ್, ಡಿ.ಸುಧಾಕರ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಅವರು ಉಪಸ್ಥಿತರಿದ್ದರು.








