ಮಡಿಕೇರಿ ಆ.4 : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಕ್ನಾಲಜಿ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಕಾಲೇಜಿನ ಇಕೋ ಕ್ಲಬ್ ವತಿಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಪ್ರಯುಕ್ತ ಮುಖ್ಯಅತಿಥಿಗಳಾಗಿ ಆಗಮಿಸಿದ ಪೊನ್ನಂಪೇಟೆ ಅರಣ್ಯ ಕಾಲೇಜಿನ ನಿವೃತ್ತ ಡೀನ್ ಸಿ.ಜಿ.ಕುಶಾಲಪ್ಪ ವಿಶ್ವ ಪ್ರಕೃತಿ ಸಂರಕ್ಷಣಾದಿನದ ಕುರಿತು ಮಾತನಾಡಿ ದಿನದ ಮಹತ್ವವನ್ನುತಿಳಿಸಿದರು.
ಕೊಡಗಿನ ಜೀವವೈವಿಧ್ಯತೆಯ ಜೊತೆಗೆ ಪ್ರಕೃತಿಯ ಸಂರಕ್ಷಣೆ, ಮಾನವ ಹಾಗೂ ವನ್ಯಜೀವಿಗಳ ಸಂಘರ್ಷ , ಜಾಗತಿಕ ತಾಪಮಾನದ ಪರಿಣಾಮ , ಕಾಫಿಮೆಣಸು ಭತ್ತದ ಕೃಷಿ, ಪ್ರವಾಸಿಕೇಂದ್ರಗಳಿಂದ ಪರಿಸರದಮೇಲಾಗುವ ಪರಿಣಾಮ ಮುಂತಾದ ವಿಚಾರಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು.
ಇದೇ ಸಂದರ್ಭ ಡಾ.ಸಿ.ಜಿ.ಕುಶಾಲಪ್ಪ ಅವರು, ಉಡುಗೊರೆಯಾಗಿ ನೀಡಿದ ಬಿದಿರಿನ ಎರಡು ವಿಶಿಷ್ಟತಳಿಗಳನ್ನು ಪ್ರಾಂಶುಪಾಲರು ಹಾಗೂ ಇಕೋ ಕ್ಲಬ್ ವಿದ್ಯಾರ್ಥಿಗಳು ಹಾಗೂ ಸಂಚಾಲಕರಾದ ಪ್ರೊ. ಕಾರ್ತಿಕ್ ಅವರ ಸಮ್ಮುಖದಲ್ಲಿ ಕಾಲೇಜು ಆವರಣದಲ್ಲಿ ನೆಡುವುದರ ಮೂಲಕ ಕಾಲೇಜು ಆವರಣದಲ್ಲಿ ಹಸಿರೀಕರಣ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಮತ್ತಷ್ಟು ಗಿಡನೆಡಲು ಪ್ರೋತ್ಸಾಹಿಸಿದರು.
ಕಾರ್ಯಕ್ರಮದಲ್ಲಿ ಒಟ್ಟು 272 ವಿಧ್ಯಾರ್ಥಿಗಳು ಭಾಗವಹಿಸಿದ್ದರು. ಇಕೋ ಕ್ಲಬ್ ವಿದ್ಯಾರ್ಥಿಗಳು ಕಾಲೇಜು ಸಿಬ್ಬಂಧಿ ವರ್ಗದವರು ಹಾಜರಿದ್ದರು.