ಮಡಿಕೇರಿ ಆ.4 : 2023-24ನೇ ಸಾಲಿನ 31ನೇ ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳು ಆ.12 ರಂದು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ.ಬೋಪಯ್ಯ ಅವರ ಗದ್ದೆಯಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೆಲ್ ಅಸೋಸಿಯೇಶನ್ ಆಫ್ ಇಂಡಿಯಾ (ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಕಗ್ಗೊಡ್ಲು ಕಾವೇರಿ ಯುವಕ ಸಂಘ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 9.30 ಗಂಟೆಯಿಂದ ಸ್ಪರ್ಧೆಗಳು ನಡೆಯಲಿವೆ ಎಂದರು.
ಸಾರ್ವಜನಿಕ ಪುರುಷ ಮತ್ತು ಮಹಿಳೆಯರ ಹಗ್ಗ ಜಗ್ಗಾಟ (9 ಜನರ ತಂಡ), ಸಾರ್ವಜನಿಕ ಪುರುಷರ ವಾಲಿಬಾಲ್ (4 ಜನರ ತಂಡ), ಸಾರ್ವಜನಿಕ ಮಹಿಳೆಯರಿಗೆ ಥ್ರೋಬಾಲ್ (6 ಜನರ ತಂಡ), ಪ್ರೌಢ ಶಾಲಾ ಬಾಲಕಿಯರಿಗೆ ಥ್ರೋಬಾಲ್ ಪಂದ್ಯಾವಳಿ (6 ಜನರ ತಂಡ), ಬಾಲಕರ ಹಗ್ಗಜಗ್ಗಟ ಪಂದ್ಯಾವಳಿ (9 ಜನರ ತಂಡ) ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಮಧ್ಯಾಹ್ನ 1 ಗಂಟೆಗೆ ಕೆಸರು ಗದ್ದೆ ಓಟದ ಸ್ಪರ್ಧೆ ನಡೆಯಲಿದ್ದು, ನಂತರ ಕಿರಿಯರ ಪಾಥಮಿಕ ಶಾಲಾ ಬಾಲಕ, ಬಾಲಕಿಯರಿಗೆ 50ಮೀ ಓಟ, ಹಿರಿಯರ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರಿಗೆ 100ಮೀ ಓಟ, ಪ್ರೌಢಶಾಲಾ ಬಾಲಕ, ಬಾಲಕಿಯರಿಗೆ 200 ಮೀ. ಓಟ, ಪದವಿ ಪೂರ್ವ ಕಾಲೇಜು ಬಾಲಕ, ಬಾಲಕಿಯರಿಗೆ 400 ಮೀ. ಓಟ, ಪದವಿ ಕಾಲೇಜು ಬಾಲಕ, ಬಾಲಕಿಯರಿಗೆ 400 ಮೀ. ಓಟ, ಸಾರ್ವಜನಿಕ ಮುಕ್ತ ಪುರುಷ ಹಾಗೂ ಮಹಿಳೆಯರಿಗೆ 300 ಮೀ. ಓಟದ ಸ್ಪರ್ಧೆ ನಡೆಯಲಿದೆ.
ಹಗ್ಗ-ಜಗ್ಗಾಟ ಸಾರ್ವಜನಿಕ ಪುರುಷರ ವಿಭಾಗಕ್ಕೆ ಮೈದಾನ ಶುಲ್ಕ ರೂ. 1,000 ಮಹಿಳೆಯರ ವಿಭಾಗ ರೂ.1,000 ವಾಲಿಬಾಲ್ ತಂಡಗಳಿಗೆ ಮೈದಾನ ಶುಲ್ಕ ರೂ.1,000 ಥ್ರೋಬಾಲ್ ಸಾರ್ವಜನಿಕ ಮಹಿಳೆಯರ ವಿಭಾಗಕ್ಕೆ ರೂ.1,000 ನಿಗಧಿಪಡಿಸಲಾಗಿದ್ದು, ಆಸಕ್ತರು ಆ.10 ರ ಅಪರಾಹ್ನ 5 ಗಂಟೆಯೊಳಗೆ ತಂಡದ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಸುಕುಮಾರ್ ತಿಳಿಸಿದರು.
ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸುವ ತಂಡಗಳಿಗೆ ನಗದು ಹಾಗೂ ಪಾರಿತೋಷಕ ನೀಡಲಾಗುವುದು. ಓಟದ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದವರಿಗೆ ಪಾರಿತೋಷಕ ಮತ್ತು ಪ್ರಶಂಸನಾ ಪತ್ರ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಪಿ.ಪಿ.ಸುಕುಮಾರ್-94812 13920, ಬಾಳಡಿ ದಿಲೀಪ್-8618568173, ಕುಂಜಿಲನ ಎಂ.ಮೋಹನ್- 9480646382, ನವೀನ್ ದೇರಳ- 9449952008, ಎ.ಆರ್.ನೇತ್ರಾವತಿ-94496 79460 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ತಾಲೂಕು ಯುವ ಒಕ್ಕೂಟದ ಮಾಜಿ ಅಧ್ಯಕ್ಷ ಕೂಡಂಡ ಸಾಬು ಸುಬ್ರಮಣಿ ಮಾತನಾಡಿ, ಈ ಬಾರಿ ದಂಪತಿಗಳ ವಿಶೇಷ ಮುಕ್ತ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಗರಿಷ್ಠ 50 ವಯೋಮಿತಿಯ ದಂಪತಿಗಳು ಕೈ ಕೈ ಹಿಡಿದುಕೊಂಡು ಓಡಿ ಅಂತ್ಯದವರೆಗೆ ಬರಬೇಕು ಎಂದರು.
ಮಡಿಕೇರಿ ತಾಲೂಕು ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್ ಮಾತನಾಡಿ, ಅಂದು ಬೆಳಿಗ್ಗೆ 9 ಗಂಟೆಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸ್‍ರಾಜು ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಮೇಕೇರಿ ಗ್ರಾ.ಪಂ ಅಧ್ಯಕ್ಷರು, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಯೂತ್ ಹಾಸ್ಟೇಲ್ ರಾಜಶೇಖರ್, ಉದ್ಯಮಿ ತೇನನ ರಾಜೇಶ್ ಪಾಲ್ಗೊಳ್ಳಲಿದ್ದಾರೆ.
ಸಂಜೆ 6.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಅಧ್ಯಕ್ಷತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ಹಾಕತ್ತೂರು ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಸೇರಿದಂತೆ ಮತ್ತಿರ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಗ್ಗೋಡ್ಲು ಕಾವೇರಿ ಯುವಕ ಸಂಘದ ಅಧ್ಯಕ್ಷ ಬಿ.ಡಿ.ದಿಶಾಂತ್ ಹಾಗೂ ಸದಸ್ಯ ಚಿದಾನಂದ ಉಪಸ್ಥಿತರಿದ್ದರು.
Breaking News
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್‌ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*