ಮಡಿಕೇರಿ ಆ.4 : ಹೂಕಾಡು ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಕಗ್ಗೋಡು ಗ್ರಾಮದ ಆಶಾ ಕಾರ್ಯಕರ್ತೆ ಯಶೋಧ ಕುಮಾರಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಎದೆ ಹಾಲಿನ ಮಹತ್ವದ ಕುರಿತು ಮಾಹಿತಿ ನೀಡಿದರು. ಎದೆ ಹಾಲು ಅಮೃತಕ್ಕೆ ಸಮಾನ. ಪ್ರತಿಯೊಬ್ಬ ತಾಯಿಯು ಮಗು ಹುಟ್ಟಿದ ಅರ್ಧ ಗಂಟೆಯೊಳಗೆ ಮೊದಲಿಗೆ ಬರುವ ಕೊಲೊಸ್ಟ್ರಂ ಗಟ್ಟಿ ಹಾಲನ್ನು ಮಗುವಿಗೆ ತಪ್ಪದೆ ಕುಡಿಸಬೇಕು ಎಂದರು.
ಈ ಹಾಲು ಕುಡಿಸುವುದರಿಂದ ಮಗುವಿನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಈ ಹಾಲಿನಲ್ಲಿ ಪ್ರೊಟೀನ್ ಮತ್ತು ವಿಟಮಿನ್ ‘ಎ’ ಹೇರಳವಾಗಿ ಸಿಗುತ್ತದೆ. ಮಗುವಿಗೆ ಆರು ತಿಂಗಳುಗಳ ಕಾಲ ಎದೆಹಾಲನ್ನು ಮಾತ್ರ ಕುಡಿಸಬೇಕು. ಆರು ತಿಂಗಳ ನಂತರ ಎದೆ ಹಾಲಿನ ಜೊತೆಗೆ ಇತರೆ ಆಹಾರವನ್ನು ನೀಡಬೇಕು. ನಮ್ಮ ಮಕ್ಕಳ ಆರೋಗ್ಯ ನಮ್ಮ ಕೈಯಲ್ಲಿ ಇರುವುದರಿಂದ ಯಾವುದೇ ಜಾಹೀರಾತುಗಳಿಗೆ ಮರುಳಾಗದೆ, ಎದೆಹಾಲನ್ನು ಮಾತ್ರ ಕುಡಿಸಬೇಕು. ಮಗು ಅನಾರೋಗ್ಯದಿಂದ ಬಳಲುತ್ತಿರುವಾಗ ಎದೆಹಾಲು ಕುಡಿಸುವುದನ್ನು ನಿಲ್ಲಿಸಬಾರದು ಎಂದು ಕಿವಿ ಮಾತು ಹೇಳಿದರು.
ಎದೆ ಹಾಲು ಸುಲಭವಾಗಿ ಜೀರ್ಣವಾಗುತ್ತದೆ. ಎದೆ ಹಾಲು ಕುಡಿಸುವುದರಿಂದ ತಾಯಿ ಮತ್ತು ಮಗುವಿನ ಬಾಂಧವ್ಯ ಹೆಚ್ಚುತ್ತದೆ. ಎದೆ ಹಾಲುಣಿಸುವುದರಿಂದ ಸ್ತನ ಕ್ಯಾನ್ಸರ್ ಬರದಂತೆ ತಡೆಗಟ್ಟಬಹುದು. ಎದೆ ಹಾಲಿನ ಬದಲು ಬೇರೆ ಹಾಲು ಕುಡಿಸುವುದರಿಂದ ಮಕ್ಕಳು ಅನಾರೋಗ್ಯಕ್ಕೀಡಾಗಬಹುದು. ಹಾಲುಣಿಸುವಾಗ ತಾಯಿಯ ಗಮನ ಕೇವಲ ಮಗುವಿನ ಕಡೆಗೆ ಮಾತ್ರ ಇರಬೇಕು. ತಾಯಿಯು ಸರಿಯಾದ ಕ್ರಮದಲ್ಲಿ ಕುಳಿತುಕೊಂಡು ಮಗುವಿಗೆ ಎದೆ ಹಾಲನ್ನು ಕುಡಿಸಬೇಕು ಎಂದು ವಿವರಿಸಿದರು.
ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಜಯಶ್ರೀ, ಸಹಾಯಕಿ ಲೀಲಾ, ಗ್ರಾಮದ ಗರ್ಭಿಣಿ, ಬಾಣಂತಿಯರು, ಮಕ್ಕಳ ತಾಯಂದಿರು ಪಾಲ್ಗೊಂಡಿದ್ದರು.
Breaking News
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*
- *ನ.30 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಮತ್ತು ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ*
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*