ಮಡಿಕೇರಿ ಆ.4 : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜು ವಿರಾಜಪೇಟೆ ಮತ್ತು ಇತಿಹಾಸ ವೇದಿಕೆ ಕೊಡಗು ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಇತಿಹಾಸ ಕಾರ್ಯಾಗಾರ ಮತ್ತು ಅಭಿನಂದನಾ ಸಮಾರಂಭ ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಗೋಣಿಕೊಪ್ಪ ಕಾವೇರಿ ಎಜುಕೇಷನ್ ಸೊಸೈಟಿಯ ಗೌರವಕಾರ್ಯದರ್ಶಿ ಕುಲ್ಲಚಂಡ ಪಿ. ಬೋಪಣ್ಣ ಮಾತನಾಡಿ, ಹಿಂದೆ ನಾವು ಹೇಗಿದ್ದೇವು ಎಂಬುದನ್ನು ತಿಳಿಯಬೇಕಾದರೆ ನಾವು ಇತಿಹಾಸವನ್ನು ಒದಲೇಬೇಕು ಹಾಗೂ ಇತಿಹಾಸವನ್ನು ನಾವು ಎಂದಿಗೂ ಮರೆಯಬಾರದು. ಅದರದಲ್ಲಿ ಹಲವು ಸ್ವಾರಸ್ಯಕರವಾದ ವಿಷಯವಿರುತ್ತದೆ ಎಂದು ಹೇಳಿದರು.
ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್ ಕಾರ್ಲ ಮಾತನಾಡಿ ಇತಿಹಾಸದ ಮಹತ್ವ ಹೊಂದಿರುವ ಭಾರತದ ಚರಿತ್ರೆಯನ್ನು ಮರೆಯಬಾರದು, ಬ್ರಿಟಿಷರು ಬರೆದಿಟ್ಟ ಇತಿಹಾಸವನ್ನು ಮಾತ್ರ ಓದುವುದರ ಬದಲು ನಮ್ಮ ಭಾರತಾಂಬೆಯ ಚರಿತ್ರೆಯನ್ನು ಎಲ್ಲೆಲ್ಲೂ ಹಬ್ಬಿಸುವ ಕೆಲಸವನ್ನು ಉಪನ್ಯಾಸಕರು ಮಾಡಬೇಕೆಂಬುವುದಾಗಿ ಕಿವಿ ಮಾತನಾಡಿದರು.
ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸಂಪಾಜೆ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಲ್ಯೋಖ್ಯಾ ನಾಯ್ಕ್, ಕೊಡಗು ಇತಿಹಾಸ ವೇದಿಕೆ ಅಧ್ಯಕ್ಷ ಎಚ್.ಜೆ.ನಾಗರಾಜು ಹಂಡ್ರಂಗಿ, ಸರಕಾರಿ ಪದವಿ ಪೂರ್ವ ಕಾಲೇಜು ಕೂಡಿಗೆಯ ಪ್ರಾಂಶುಪಾಲರಾದ ಬಸಪ್ಪ, ಕಾರ್ಯಾಗಾರದ ಪ್ರಾಜೆಕ್ಟ್ ಮತ್ತು ಅಸೈನ್‍ಮೆಂಟ್‍ಗಳ ಬಗ್ಗೆ ಮತ್ತು ಅಂಕಗಳನ್ನು ನೀಡುವುದರ ಬಗ್ಗೆ ಸವಿವರವಾಗಿ ಉಪನ್ಯಾಸಕರಿಗೆ ತಿಳಿಸಿಕೊಟ್ಟರು.
ಸಮಾರಂಭದ ಅಧ್ಯಕ್ಷತೆಯನ್ನು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್.ಎಂ.ನಾಣಯ್ಯ ವಹಿಸಿದ್ದು, ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.
ಸಮಾರಂಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿದೇಶಕರಾದ ಪುಟ್ಟರಾಜು ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
2022-23ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯ ಕಲಾವಿಭಾಗದ ಇತಿಹಾಸ ವಿಷಯದಲ್ಲಿ ಶೇಕಡಾ 100ಫಲಿತಾಂಶವನ್ನು ತಂದುಕೊಟ್ಟ ಹನ್ನೆರಡು ಇತಿಹಾಸ ಸಾಧಕ ಉಪನ್ಯಾಸಕರುಗಳನ್ನು ಕೊಡಗು ಇತಿಹಾಸ ವೇದಿಕೆಯ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಇತಿಹಾಸ ಕಾರ್ಯಾಗಾರ ಮತ್ತು ಅಭಿನಂದನಾ ಸಮಾರಂಭದಲ್ಲಿ ವಿವಿಧ ಕಾಲೇಜಿನ ಉಪನ್ಯಾಸಕ ವೃಂದದವರು ಮತ್ತು ಕಾವೇರಿ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.
Breaking News
- *ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ : ಕಾಂಗ್ರೆಸ್ ಕಾರ್ಯಕರ್ತ ಅಮಾನತು*
- *ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ*
- *ಸಿಎನ್ಸಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ದಿನ ಆಚರಣೆ*
- *ಪದ್ಮಶ್ರೀ ಪುರಸ್ಕೃತ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಅಭಿನಂದನೆ*
- *‘ಕೃತಕ ಅಂಗಾಂಗಗಳ ಜೋಡಣೆ ಮತ್ತು ಆರೋಗ್ಯ ತಪಾಸಣೆ’ ಶಿಬಿರ : ಬಡವರಿಗೆ ಅಗತ್ಯ ಆರೋಗ್ಯ ಸೌಲಭ್ಯ : ಸಚಿವ ಭೋಸರಾಜು*
- *ರಾಜ್ಯದಲ್ಲೇ ವಿನೂತನ ಪ್ರಯತ್ನ : ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ ಉದ್ಘಾಟನೆ*
- *ಕೆ.ಎಸ್.ದರ್ಶನ್ ಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ*
- *ಕಾಲ್ಚೆಂಡು ಪಂದ್ಯಾವಳಿ : ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್*
- *ವಿರಾಜಪೇಟೆ : ವಿವಿಧತೆಯಲ್ಲಿ ಏಕತೆಕಂಡಿರುವ ಸಂವಿಧಾನವನ್ನು ಗೌರವಿಸುವಂತಾಗಬೇಕು : ವಕೀಲ ಪುಷ್ಪರಾಜ್*
- *ಸೋಮವಾರಪೇಟೆ : ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*