ಮಡಿಕೇರಿ ಆ.4 : ಬೆಳೆಹಾನಿ ಸಮೀಕ್ಷೆ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆಯಿತು.
ಜುಲೈ ಮೂರನೇ ವಾರ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ಹಲವು ಕಡೆಗಳಲ್ಲಿ ಕಾಫಿ ಸೇರಿದಂತೆ ತೋಟಗಾರಿಕೆ ಬೆಳೆಗಳು ಹಾನಿಯಾಗಿದ್ದು, ಈ ಸಂಬಂಧ ನಿಖರ ವರದಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಹೆಚ್ಚಿನ ಮಳೆಯಾಗಿ ಬೆಳೆ ಹಾನಿಯಾಗಿರುವ ಬಗ್ಗೆ ಸಮೀಕ್ಷೆ ಮಾಡಿ ವರದಿ ನೀಡಬೇಕು. ಬೆಳೆ ಹಾನಿ ಸಮೀಕ್ಷೆ ಸಂಬಂಧಿಸಿದಂತೆ ಸ್ಥಳೀಯರಿಗೆ ಮಾಹಿತಿ ಇರಬೇಕು. ಆ ನಿಟ್ಟಿನಲ್ಲಿ ಬೆಳೆ ಹಾನಿ ಸಮೀಕ್ಷೆಯನ್ನು ಕೈಗೊಂಡು ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು.
ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್ ಮತ್ತು ಕಾಫಿ ಮಂಡಳಿ ಉಪ ನಿರ್ದೇಶಕರಾದ ಚಂದ್ರಶೇಖರ್ ಅವರು ಮಾತನಾಡಿ ಬೆಳೆ ಹಾನಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.
ಸಭೆಯಲ್ಲಿ ಕೃಷಿ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಕ್, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಪ್ರಮೋದ್, ಎಸ್.ಎನ್.ನರಗುಂದ, ಪ್ರಕಾಶ್ ಅವರು ಬೆಳೆ ಹಾನಿ ಸಮೀಕ್ಷೆ ಬಗ್ಗೆ ಹಲವು ಮಾಹಿತಿ ನೀಡಿದರು.