ಮಡಿಕೇರಿ ಆ.4 : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೀಡಿರುವ ಆಕ್ಷೇಪಾರ್ಹ ಹೇಳಿಕೆ ಖಂಡನೀಯವೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಕೆ.ಸತೀಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣದ ಬಗ್ಗೆ ಆರಗ ಜ್ಞಾನೇಂದ್ರ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೀಗ ವಿಷಾದ ವ್ಯಕ್ತಪಡಿಸುವ ನಾಟಕವಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಕೇವಲ ವಿಷಾದ ವ್ಯಕ್ತಪಡಿಸಿದರೆ ಹಿರಿಯ ದಲಿತ ನಾಯಕನಿಗೆ ಆದ ನೋವು ಸರಿ ಹೋಗಲು ಸಾಧ್ಯವಿಲ್ಲ, ತಾವು ಮಾಡಿದ ತಪ್ಪಿಗೆ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಆರಗ ಜ್ಞಾನೇಂದ್ರ ಅವರ ಹೇಳಿಕೆ ಬಿಜೆಪಿಗೆ ದಲಿತರ ಬಗ್ಗೆ ಎಷ್ಟು ಗೌರವವಿದೆ ಎನ್ನುವುದನ್ನು ಸಾಬೀತು ಪಡಿಸಿದೆ. ದಲಿತ ನಾಯಕರ ಬೆಳವಣಿಗೆಯನ್ನು ಸಹಿಸಲಾಗದ ಬಿಜೆಪಿ ಮಂದಿ ಈ ರೀತಿಯ ಕೀಳು ಮಟ್ಟದ ಭಾಷೆಗಳನ್ನು ಬಳಸಿ ನೋವುಂಟು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನು ನಾಡಿನ ಜನ ಸಹಿಸುವುದಿಲ್ಲ ಎಂದು ಸತೀಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಪಕ್ಷಕ್ಕೆ ದಲಿತರ ಬಗ್ಗೆ ನೈಜ ಗೌರವವಿದ್ದರೆ ತಕ್ಷಣ ಆರಗ ಜ್ಞಾನೇಂದ್ರ ಅವರನ್ನು ಉಚ್ಚಾಟಿಸಬೇಕು ಎಂದು ಒತ್ತಾಯಿಸಿದ್ದಾರೆ.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*