ಸೋಮವಾರಪೇಟೆ ಆ.5 : ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಹೊಣೆ ಶಿಕ್ಷಕರ ಮೇಲಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಹೇಮಂತ್ ಹೇಳಿದರು.
ಸೋಮವಾರಪೇಟೆ ಚನ್ನಬಸಪ್ಪ ಸಭಾಂಗಣದಲ್ಲಿ ಭಾರತ ಸೇವಾದಳದ ಕೊಡಗು ಜಿಲ್ಲಾ ಘಟಕದಿಂದ ನಡೆದ ತಾಲ್ಲೂಕು ಮಟ್ಟದ ಶಿಕ್ಷಕ ಮತ್ತು ಶಿಕ್ಷಕಿಯರಿಗೆ ಒಂದು ದಿನ ಮಿಲಾಫ್ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಆಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕು. ಸೇವಾದಳದಲ್ಲಿ ಪ್ರತಿಫಲಾಫೇಕ್ಷೆಯಿಲ್ಲದೆ ಶಿಕ್ಷಕರು ಕೆಲಸ ಮಾಡಬೇಕು. ರಾಷ್ಟ್ರಪಿತ ಮಹಾತ್ಮಗಾಂಧಿಯವರ ತತ್ವ ಮತ್ತು ಕಾರ್ಯಕ್ರಮಗಳ ತಳಹದಿಯ ಮೇಲೆ ಯುವಕರನ್ನು ಸಂಘಟಿಸಲು ರಾಷ್ಟ್ರೀಯ ಸೇವೆಗಾಗಿ ತರಬೇತಿಯನ್ನು ನೀಡಲಾಗುತ್ತಿದೆ. ಭಾರತದ ಆದರ್ಶ ನಾಗರಿಕರನ್ನಾಗಿ ಮಾಡಲು, ಅವರಲ್ಲಿ ಸಂಯಮ, ಶಿಸ್ತು, ಧೈರ್ಯ. ತ್ಯಾಗ, ಸರಳತೆ, ಸೇವೆ, ತಾಳ್ಮೆ, ಸಹಕಾರ ಮತ್ತು ಸೇವಾ ಮನೋಭಾವ ಮೂಡಿಸುವುದು ಸೇವಾದಳದ ಪ್ರಮುಖ ಯೋಜನೆಯಾಗಿದೆ ಎಂದರು.
ಕಾರ್ಯಗಾರದ ಅಧ್ಯಕ್ಷತೆಯನ್ನು ಜಿಲ್ಲಾ ಸಮಿತಿ ಅಧ್ಯಕ್ಷ ಕರುಂಬಯ್ಯ ವಹಿಸಿದ್ದರು. ಅವರು ಮಾತನಾಡಿ, ಕಳೆದ ಹಲವು ವರ್ಷಗಳಿಂದ ತಾಲ್ಲೂಕಿನ ಹೆಚ್ಚಿನ ಶಾಲೆಗಳಲ್ಲಿ ಸೇವಾದಳದ ಚಟುವಟಿಕೆಗಳು ನಡೆಯುತ್ತಿದ್ದವು. ಆದರೆ, ಕೋವಿಡ್ 19ರ ನಂತರ ಕೆಲವು ಶಾಲೆಗಳಲ್ಲಿ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ. ಎಲ್ಲ ಶಾಲೆಗಳಲ್ಲಿ ವಾರದಲ್ಲಿ ಕೇವಲ ಒಂದು ತರಗತಿಯನ್ನು ಸೇವಾದಳ ನಡೆಸಲು ಅವಕಾಶ ಮಾಡಿದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುವುದು ಎಂದರು.
ಕಾರ್ಯಗಾರದಲ್ಲಿ ಭಾರತ ಸೇವಾದಳದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಪಿ. ಗೋಪಾಲ್, ತಾಲ್ಲೂಕು ದೈಹಿಕ ಶಿಕ್ಷಣ ವಿಷಯ ಪರಿವೀಕ್ಷಕರಾದ ಸುಕುಮಾರಿ, ಸದಸ್ಯರಾದ ಮೀರ ಸುಮನ್ ಕ್ಯಾಸ್ತಲಿನ್ ಇದ್ದರು.
Breaking News
- *ಎಂ.ಎಂ.ಸುಪ್ರಿತಾಗೆ ಚಿನ್ನದ ಪದಕ*
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*
- *ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
- *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*