ಕಲಬುರಗಿ: ಬಹು ನಿರೀಕ್ಷಿತ ‘ಗೃಹ ಜ್ಯೋತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿದರು.
ನೂತನ ವಿದ್ಯಾಲಯ (ಎನ್‌ವಿ) ಮೈದಾನದಲ್ಲಿ ಇಂಧನ ಇಲಾಖೆ ಹಾಗೂ ಜೆಸ್ಕಾಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ‘ಗೃಹ ಜ್ಯೋತಿ’ ಯೋಜನೆ ಉದ್ಘಾಟನೆಗಾಗಿ ವೇದಿಕೆಯ ಮೇಲೆ ನಿರ್ಮಿಸಲಾದ ಮಾದರಿ ಮನೆಯ ವಿದ್ಯುತ್ ದೀಪ ಬೆಳಗಿಸುವ ಮೂಲಕ ಯೋಜನೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು.
ಈ ಸಂದರ್ಭ ರಾಜ್ಯಸಭೆಯ ವಿರೋಧಪಕ್ಷದ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಇಂಧನ ಸಚಿವ ಕೆ.ಜೆ. ಜಾರ್ಜ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಪೌರಾಡಳಿತ ಸಚಿವ ರಹೀಂ ಖಾನ್, ಅರಣ್ಯ ಸಚಿವ ಈಶ್ವರ ಖಂಡ್ರೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಹಾಜರಿದ್ದರು.