ಮಡಿಕೇರಿ ಆ.5 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಈಚೆಗೆ ಮಹಿಳಾ ಸಮಾಜದಲ್ಲಿ ಜರುಗಿದ ಕವಯತ್ರಿ ಜಲಜಾಶೇಖರ್ ಅವರ ‘ನೆಲ ಮುಗಿಲು’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸ, ಡಾ.ಮೋಹನ್ ಪಾಳೇಗಾರ್, ಹಾಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ. ಪಿ. ರಮೇಶ್ ಅವರುಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ.ವಿಜೇತ್, ಮಾಜಿ ಅಧ್ಯಕ್ಷ ಜೆ. ಸಿ. ಶೇಖರ್, ಕವಯತ್ರಿ ಜಲಕಾಳಪ್ಪ ಇದ್ದರು.










