ಮಡಿಕೇರಿ ಆ.5 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪಿಡಿಒ, ಎಫ್‍ಡಿಎ, ಎಸ್‍ಡಿಎ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲು ನಿರ್ಧರಿಸಿದೆ.
ಆಸಕ್ತರು ಆ.14 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.ಸಂ. 0821-2515944 ನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ.ಕೆ.ಎಲ್.ಎನ್.ಮೂರ್ತಿ ತಿಳಿಸಿದ್ದಾರೆ.










