ಮಡಿಕೇರಿ ಆ.5 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕೊಡಗು ಗೌಡ ಯುವ ವೇದಿಕೆ ಮತ್ತು ನರಿಯಂದಡ ಅಯ್ಯಪ್ಪ ಯುವಕ ಸಂಘ ಇವರ ಸಹಯೋಗದಲ್ಲಿ ‘ಆಟಿ ಜಂಬರ’ ಕಾರ್ಯಕ್ರಮವು ಆ.13 ರಂದು ಬೆಳಗ್ಗೆ 9 ಗಂಟೆಗೆ ಪಾರಾಣೆ ಗೌಡ ಸಮಾಜದಲ್ಲಿ ನಡೆಯಲಿದೆ.
ನರಿಯಂದಡ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷರಾದ ಬೆಳಿಯಂಡ್ರ ಹರಿಪ್ರಸಾದ್, ಪಾರಾಣೆ ಗೌಡ ಸಮಾಜದ ಅಧ್ಯಕ್ಷರಾದ ಮುಕ್ಕಾಟಿ ಕುಶಾಲಪ್ಪ, ಮಾಜಿ ಸೈನಿಕರು ಹಾಗೂ ನರಿಯಂದಡ ಅಯ್ಯಪ್ಪ ಯುವಕ ಸಂಘದ ಸ್ಥಾಪಕ ಅಧ್ಯಕ್ಷರಾದ ಬೆಳಿಯಂಡ್ರ ಲಕ್ಷ್ಮಣ್, ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷರಾದ ಪಾಣತ್ತಲೆ ಜಗದೀಶ್ ಮಂದಪ್ಪ ಇತರರು ಪಾಲ್ಗೊಳ್ಳಲಿದ್ದಾರೆ. (ತೋಟಂಬೈಲ್ ಅನಂತ್ ಕುಮಾರ್ ಅವರ ಒಕ್ಕಣೆ ನಂತರ ನಾಟಿ ನೆಟ್ಟ್ ಆಟಿ ಜಂಬರ ಉದ್ಘಾಟನೆ)
ನಂತರ ಬೆಳಗ್ಗೆ 9.30 ಗಂಟೆಗೆ ಆಟಿ ಆಟೋಟ ಪ್ರದರ್ಶನ, ಬಳಿಕ ಬೆಳಗ್ಗೆ 11.30 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.
ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ, ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷರಾದ ಪಾಣತ್ತಲೆ ಜಗದೀಶ್ ಮಂದಪ್ಪ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಕೊಡಗು ಜಾನಪದ ಪರಿಷತ್ತು ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಪಾರಾಣೆ ಗೌಡ ಸಮಾಜದ ಅಧ್ಯಕ್ಷರಾದ ಮುಕ್ಕಾಟಿ ಕುಶಾಲಪ್ಪ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಿಲನಾ ಭರತ್ ಇತರರು ಪಾಲ್ಗೊಳ್ಳಲಿದ್ದಾರೆ. ಮೈಸೂರು ಶೇಷಾದ್ರಿಪುರಂ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಲಾವಣ್ಯ ಸಿ.ಪಿ.ಕೊಟ್ಟಕೇರಿಯನ ಅವರು ಆಟಿ ತಿಂಗಳ ವಿಶೇಷತೆ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ನಂತರ ಮಧ್ಯಾಹ್ನ 2.30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*