ಮಡಿಕೇರಿ ಆ.5 : ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತಾಲಯದ ಮನವಿಯಂತೆ ಉಚ್ಛ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಿದಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳಿಗೆ ಅನ್ವಯವಾಗುವಂತೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ರಿಯಾಯಿತಿಯು 2023 ರ ಸೆಪ್ಟೆಂಬರ್, 9 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









