ಮಡಿಕೇರಿ ಆ.5 : ಕಂಜಕ್ಟವೈಟೀಸ್(Madras Eye) ಇದು ಒಂದು ವೈರಸ್‍ನಿಂದ ಹರಡುವ ಕಾಯಿಲೆ, ಕಣ್ಣಿನ ಬಿಳಿಭಾಗವನ್ನು ಆವರಿಸುವ ಕಣ್ಣಿನ ಮುಂಭಾಗದಲ್ಲಿ ಇರುವ ಪದರದ ಸೋಂಕಿಗೆ (ಉರಿಊತ) ಇದಕ್ಕೆ ಕಂಜಕ್ಟವೈಟೀಸ್ ಎನ್ನುತ್ತಾರೆ. ಇದು ಹೆಚ್ಚಾಗಿ ಮಳೆಗಾಲದ ಆರಂಭ ಹಂತದಲ್ಲಿ ಕಂಡು ಬರುವ ಸಾಧ್ಯತೆಗಳು ಹೆಚ್ಚು. ಸೋಂಕಿತ ವ್ಯಕ್ತಿಯ ಕಣ್ಣಿನಿಂದ ಬರುವ ದ್ರವದ (Discharge) ಸಂಪರ್ಕದಿಂದ ಆರೋಗ್ಯವಂತ ವ್ಯಕ್ತಿಗೆ ಹರಡುತ್ತದೆ.
ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದರಿಂದ ಬೇರೆಯವರಿಗೆ ಸೋಂಕು ಹರಡುವುದನ್ನು ತಡೆಗಟ್ಟಬಹುದು. ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಕಂಡು ಬರುತ್ತದೆ. ವಿಶೇಷವಾಗಿ ಶಾಲಾ ಕಾಲೇಜು, ವಸತಿ ನಿಲಯಗಳಲ್ಲಿ ಮತ್ತು ಅತಿಥಿ ಗೃಹಗಳಲ್ಲಿ (ಪಿ.ಜಿ) ಈ ಸೋಂಕು ಬೇಗ ಹರಡುವ ಸಾಧ್ಯತೆ ಹೆಚ್ಚು. 3 ರಿಂದ 5 ದಿನಗಳಲ್ಲಿ ಗುಣ ಮುಖವಾಗುತ್ತದೆ. ಎಲ್ಲಾ ವಯಸ್ಸಿನವರಲ್ಲಿ ಕಂಡು ಬರುತ್ತದೆ.
ಲಕ್ಷಣಗಳು: ಕಣ್ಣು ಕೆಂಪಾಗುವಿಕೆ, ನೀರು ಸೋರುವಿಕೆ, ಅತಿಯಾದ ಕಣ್ಣೀರು, ಕಣ್ಣಿನಲ್ಲಿ ತುರಿಕೆ, ಸತತ ಕಣ್ಣು ನೋವು ಹಾಗೂ ಚುಚ್ಚುವಿಕೆ, ಬೆಳಕನ್ನು ನೋಡಲು ಸಾಧ್ಯವಾಗದಿರುವುದು, ದೃಷ್ಠಿ ಮುಸಕಾಗುವುದು/ ಮಂಜಾಗುವುದು, ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತ ದ್ರವದಿಂದ ಅಂಟಿರುವುದು, ರೆಪ್ಪೆ ಊದಿಕೊಳ್ಳುವುದು, ಈ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಚಿಕಿತ್ಸೆ/ ಸಲಹೆ ಪಡೆಯಬೇಕು.
ಚಿಕಿತ್ಸೆ: ಶುಚಿಯಾದ ಒದ್ದೆ ಮಾಡಿದ ಬಟ್ಟೆ ಅಥವಾ ಹತ್ತಿಯ ಉಂಡೆಗಳಿಂದ ಉಗುರು ಬೆಚ್ಚಗಿನ ನೀರಿನಿಂದ ಕಣ್ಣುಗಳನ್ನು ಸ್ವಚ್ಚಗೊಳಿಸುವುದು, ವೈದ್ಯರ ಸಲಹೆ ಮೇರೆಗೆ ಔಷಧಿಗಳನ್ನು ಬಳಸುವುದು, ಶಾಲಾ ವಿದ್ಯಾರ್ಥಿ/ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಸೋಂಕು ಕಂಡು ಬಂದಲ್ಲಿ ಅವರನ್ನು ಶಾಲೆಯಿಂದ ಪ್ರತ್ಯೇಕಿಸಿ ಚಿಕಿತ್ಸೆ ನೀಡುವುದು. ಸೋಂಕಿತ ವ್ಯಕ್ತಿಯು ಬಳಸಿದ ಕರವಸ್ತ್ರ ಹಾಗೂ ಇತರೆ ವಸ್ತುಗಳನ್ನು ಬೇರೆಯವರು ಬಳಸಬಾರದು. ಪದೇ ಪದೇ ಕಣ್ಣುಗಳನ್ನು ಮುಟ್ಟಬಾರದು. ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದು ಉತ್ತಮ.
ಮುಂಜಾಗ್ರತಾ ಕ್ರಮಗಳು: ವೈಯಕ್ತಿಕ ಸ್ವಚ್ಚತೆಗೆ ಆದ್ಯತೆ ಕೊಡಿ, ಆರೋಗ್ಯವಂತ ವ್ಯಕ್ತಿಯು ಸೋಂಕುಳ್ಳ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರವಿರಬೇಕು. ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನು ತೊಳೆಯಬೇಕು. ಸೋಂಕಿತ ವ್ಯಕ್ತಿಗಳಿಗೆ ಶೀತ, ಕೆಮ್ಮು, ಜ್ವರ ಇದ್ದಲ್ಲಿ ತಕ್ಷಣವೇ ಚಿಕಿತ್ಸೆ ಪಡೆಯಬೇಕು. ತೀವ್ರತರದ ಸೋಂಕು ಉಂಟಾದಲ್ಲಿ ತಕ್ಷಣವೇ ನೇತ್ರ ತಜ್ಞರಿಂದ ಚಿಕಿತ್ಸೆ ಪಡೆಯಬೇಕು.
ಏನು ಮಾಡಬೇಕು : ಸ್ವಚ್ಚವಾದ ನೀರಿನಿಂದ ಕಣ್ಣುಗಳನ್ನು ಶುಚಿಗೊಳಿಸಬೇಕು. ಸೋಂಕು ಕಂಡುಬಂದ ತಕ್ಷಣ ವೈದ್ಯರಿಂದ ಚಿಕಿತ್ಸೆ/ ಸಲಹೆ ಪಡೆಯಿರಿ, ಸೋಂಕಿತ ವ್ಯಕ್ತಿಗಳಿಗೆ ಪೌಷ್ಟಿಕ ಅಹಾರ ನೀಡಿರಿ, ಸೋಂಕಿತ ವ್ಯಕ್ತಿಗಳು ಬಳಸಿದ ಕೈವಸ್ತ್ರ/ಟವಲ್ ಇನ್ನಿತರ ವಸ್ತುಗಳನ್ನು ಸಂಸ್ಕರಿಸಿ ಬಳಸಬೇಕು.
ಏನು ಮಾಡಬಾರದು : ಕೈಗಳಿಂದ ಪದೇ ಪದೇ ಕಣ್ಣುಗಳನ್ನು ಮುಟ್ಟಬೇಡಿ, ಸ್ವಯಂ ಚಿಕಿತ್ಸೆ ವಿಧಾನಗಳನ್ನು ಮಾಡಬಾರದು, ಸೋಂಕಿತ ವ್ಯಕ್ತಿಯ ಸನಿಹದಿಂದ ದೂರವಿರಬೇಕು. ಸೋಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನು ಮುಟ್ಟಬಾರದು.
ಹೆಚ್ಚಿನ ಮಾಹಿತಿಗೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ಅಥವಾ ಉಚಿತ ಆರೋಗ್ಯ ಸಹಾಯವಾಣಿ 104 ಕ್ಕೆ ಕರೆ ಮಾಡಿ ಪಡೆಯಬಹುದು ಎಂದು ಅಂಧತ್ವ ನಿಯಂತ್ರಣ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ಎನ್.ಆನಂದ್ ಅವರು ತಿಳಿಸಿದ್ದಾರೆ.
Breaking News
- *ವಾರ ಭವಿಷ್ಯ: ನ.25 ರಿಂದ ನ.30ರ ವರೆಗಿನ ಆರುದಿನಗಳು ಹೇಗಿರಲಿದೆ…?
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*