ಮಡಿಕೇರಿ ಆ.5 : ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಮತ್ತೆ ಸಂಸತ್ ಸ್ಥಾನ ದೊರೆಯುತ್ತಿರುವುದನ್ನು ಸ್ವಾಗತಿಸಿ ಕುಶಾಲನಗರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು.
ರಾಹುಲ್ ಗಾಂಧಿ ಅವರ ಪ್ರಕರಣದಲ್ಲಿ ಗುಜರಾತ್ ಹೈ ಕೋರ್ಟ್ ವಿಧಿಸಿದ ಶಿಕ್ಷೆಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದ ಕ್ರಮವನ್ನು ಬ್ಲಾಕ್ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತಿಸಿ ಸಂಭ್ರಮಿಸಿದರು
ಕುಶಾಲನಗರ ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಗಣಪತಿ ದೇವಾಲಯದ ಮುಂಭಾಗ ಸೇರಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿ ಸಿಹಿ ಹಂಚಿದರು.
ಕೆ.ಪಿ.ಸಿ.ಸಿ ಸದಸ್ಯ ಮಂಜುನಾಥ್ ಗುಂಡೂರಾವ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಉಪಾಧ್ಯಕ್ಷ ಶಿವಶಂಕರ್, ಜಿ.ಪಂ ಮಾಜಿ ಸದಸ್ಯ ಪಿ.ಎಂ.ಲತೀಫ್, ಪುರಸಭೆ ಸದಸ್ಯ ಶೇಕ್ ಕಲೀಮುಲ್ಲ, ದಿನೇಶ್, ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷ ಕಿರಣ್ ಕುಮಾರ್, ಪಕ್ಷದ ಸಾಮಾಜಿಕ ಜಾಲಾತಾಣದ ಪ್ರಮುಖ ಅಬ್ದುಲ್ ರಜಾಕ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.









