ಮಡಿಕೇರಿ ಆ.5 : ಈಶಾನ್ಯ ರಾಜ್ಯ ಮಣಿಪುರದಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರ ಪ್ರಕರಣವನ್ನು ಖಂಡಿಸಿ, ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವಂತೆ ಆಗ್ರಹಿಸಿ ಕೊಡಗು ಜಿಲ್ಲಾ ಮಹಿಳೋದಯ ಮಹಿಳಾ ಒಕ್ಕೂಟ(ಓಡಿಪಿ) ನಗರದಲ್ಲಿ ಪ್ರತಿಭಟನೆ ನಡೆಸಿತು.
ಕೊಡಗು ಜಿಲ್ಲಾ ಮಹಿಳೋದಯ ಮಹಿಳಾ ಒಕ್ಕೂಟದ ವಲಯ ಸಂಯೋಜಕರಾದ ಜಾಯ್ಸ್ ಮೆನೇಜಸ್, ಓಡಿಪಿ ಸಂಸ್ಥೆ ಮೈಸೂರಿನ ಸಂಯೋಜಕರಾದ ಮೋಲಿ ಅವರ ನೇತೃತ್ವದಲ್ಲಿ ಸಂಘಟನೆಯ ಸದಸ್ಯರು ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ ವೃತ್ತವನ್ನು ಹಾದು ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಘೋಷಣೆಗಳೊಂದಿಗೆ ಮೆರವಣಿಗೆ ನಡೆಸಿದರು.
ಜಿಲ್ಲಾಡಳಿತ ಭವನದ ಮುಂಭಾಗ ನಡೆದ ಪ್ರತಿಭಟನೆ ಸಂದರ್ಭ ಕೊಡಗು ಮಹಿಳಾ ಒಕ್ಕೂಟ(ಓಡಿಪಿ)ದ ವಲಯ ಸಂಯೋಜಕಿ ಜಾಯ್ಸ್ ಮೆನೇಜಸ್ ಮಾತನಾಡಿ, ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ನಡೆಸಿರುವ ಮತ್ತು ಅತ್ಯಾಚಾರಗೈದಿರುವ ಅಮಾನುಷ ಘಟನೆ ನಡೆದಿದೆ. ಇದಕ್ಕೆ ಕಾರಣರಾದವರನ್ನು ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಿವುದರೊಂದಿಗೆ ಮರಣ ದಂಡನೆ ವಿಧಿಸಬೇಕೆಂದು ಆಗ್ರಹಿಸಿದರು.
ಪ್ರಸ್ತುತ ದೇಶ ವ್ಯಾಪಿ ಮಹಿಳೆಯರ ಮೇಲೆ ದೌರ್ಜನ್ಯ, ಹಿಂಸೆಗಳು ನಿರಂತರವಾಗಿ ನಡೆಯುತ್ತಿವೆ. ಇವುಗಳನ್ನು ನಿಯಂತ್ರಿಸಲು ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ದುಷ್ಕೃತ್ಯವೆಸಗುವವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು.
ಮೈಸೂರು ಓಡಿಸಿ ಸಂಸ್ಥೆಯ ಸಂಯೋಜಕರಾದ ಮೋಲಿ ಅವರು ಮಾತನಾಡಿ, ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದಿರುವ ಅಮಾನವೀಯ ಘಟನೆಯನ್ನು ಸಂಸ್ಥೆ ತೀವ್ರವಾಗಿ ಖಂಡಿಸುತ್ತದೆ. ಸಂವಿಧಾನದಲ್ಲಿ ಮತ್ತು ಕಾನೂನಿನಲ್ಲಿ ಮಹಿಳೆಯರಿಗೆ ಪ್ರಾಶಸ್ತ್ಯವನ್ನು ನೀಡಲಾಗಿದೆಯಾದರು, ಇದರ ಅನುಷ್ಟಾನ ಸಮರ್ಪಕವಾಗಿ ಆಗುತ್ತಿಲ್ಲವೆಂದು ಬೇಸರ ವ್ಯಕಪಡಿಸಿ, ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸಲು ಆಟಳಿತ ವ್ಯವಸ್ಥೆ ಮುಂದಾಗಬೇಕೆಂದು ತಿಳಿಸಿದರು.
ಪ್ರತಿಭಟನೆಯ ಬಳಿಕ ಜಿಲ್ಲಾಡಳಿತಕ್ಕೆ ಮಹಿಳೋದಯ ಮಹಿಳಾ ಒಕ್ಕೂಟದ ಪ್ರಮುಖರು ಮನವಿ ಸಲ್ಲಿಸಿ, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸೆ ಮತ್ತು ಅತ್ಯಾಚಾರ ಪ್ರಕರಣಗಳನ್ನು ತಡೆಯಲು ಕ್ರಮ ಕೈಗೊಳ್ಳವಬೇಕು, ಮಹಿಳೆಯರು ನಿರ್ಭೀತಿಯಿಂದ ಬದುಕಲು ಸೂಕ್ತ ರಕ್ಷಣೆ ಒದಗಿಸಬೇಕು, ಮಹಿಳೆಯರ ಮೇಲೆ ದೌರ್ಜನ್ಯವೆಸಗುವವರಿಗೆ ಮತ್ತು ಅತ್ಯಾಚಾರಿಗಳಿಗೆ ಮರಣ ದಂಡನೆ ವಿಧಿಸಬೇಕು, ಬಂಧಿಸಲ್ಪಟ್ಟಿರುವ ಮಣಿಪುರದ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಜಾರಿಮಾಡಬೇಕು, ಶೋಷಣೆಗೊಳಗಾದ ಕುಟುಂಬಕ್ಕೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯನ್ನು ನೀಡಬೇಕು.
ಅತ್ಯಾಚಾರಿಗೆಳಿಗೆ ವಿಧಿಸುವ ಶಿಕ್ಷೆಯನ್ನು ಮತ್ತಷ್ಟು ಕಠಿಣಗೊಳಿಸಬೇಕು, ಈಗಿರುವ ಶಿಕ್ಷೆಯ ವಿಧಾನವನ್ನು ಬದಲಿಸಬೇಕು ಮತ್ತು ಅತೀ ಶೀಘ್ರದಲ್ಲಿ ತೀರ್ಪು ನೀಡಿ ಉಗ್ರರನ್ನು ಮಟ್ಟಹಾಕಬೇಕು, ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಘಟನೆ ಮರುಕಳಿಸಬಾರದು ಮತ್ತು ಮಣಿಪುರದ ಕಾನೂನು ವ್ಯವಸ್ಥೆಯನ್ನು ಉತ್ತಮಗೊಳಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಪ್ರತಿಭಟನೆಯಲ್ಲಿ ಮಹಿಳೋದಯ ಮಹಿಳಾ ಒಕ್ಕೂಟದ ಪ್ರಮುಖರಾದ ವಿಜಯ ನಾರಾಯಣ, ಚಿನ್ನಮ್ಮ, ಮೀನಾ ಕುಮಾರಿ, ತಾರಾ, ಲಲಿತ, ಮೈಸೂರು ಓಡಿಪಿಯ ಲಲಿತಾ, ರೇಣು ಕುಮಾರಿ, ಜುಲೇಕಾಬಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*