ಮಡಿಕೇರಿ ಆ.5 : ಕೊಡಗು ಜಿಲ್ಲೆಯ ವಿವಿಧ ಸಿ.ಜೆ ಮತ್ತು ಜೆಎಂಎಫ್‍ಸಿ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರುಗಳ ಹುದ್ದೆಯಲ್ಲಿ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಕೆಲಸ ನಿರ್ವಹಿಸಲು ಆಸಕ್ತಿಯುಳ್ಳ ಅರ್ಹ ವಕೀಲರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಸಂಚಿತ ಸಂಭಾವನೆಯಾಗಿ ರೂ.35 ಸಾವಿರ ಪಡೆಯಲು ಅರ್ಹರಿರುತ್ತಾರೆ. ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಕೊನೆಯ ದಿನಾಂಕ ಆಗಸ್ಟ್, 20 ಕ್ಕೆ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಅರ್ಹ ಅಭ್ಯರ್ಥಿಗಳು ಸದಸ್ಯ ಕಾರ್ಯದರ್ಶಿ ಗುತ್ತಿಗೆ ಆಧಾರದ ಸಹಾಯಕ ಸರ್ಕಾರಿ ಅಭಿಯೋಜಕರ ನೇಮಕಾತಿ ಸಮಿತಿ ಮತ್ತು ಸರ್ಕಾರಿ ಅಭಿಯೋಜಕರು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಡಿಕೇರಿ ಕೊಡಗು ಜಿಲ್ಲೆ, ಇವರಿಗೆ ಆಗಸ್ಟ್ 20 ರೊಳಗೆ ಅರ್ಜಿಯನ್ನು ಪೂರ್ಣ ಲಗತ್ತುಗಳೊಂದಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಸರ್ಕಾರಿ ಅಭಿಯೋಜಕರು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಡಿಕೇರಿ ಕೊಡಗು ಜಿಲ್ಲೆ, ಇವರನ್ನು ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸರ್ಕಾರಿ ಅಭಿಯೋಜಕರು ತಿಳಿಸಿದ್ದಾರೆ.












