ಮಡಿಕೇರಿ ಆ.5 : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿರುವುದು ಖಂಡನೀಯವೆoದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಿರಿಯ ಶಾಸಕರಾಗಿರುವ ಆರಗ ಜ್ಞಾನೇಂದ್ರ ಅವರು ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಆದರೆ ವಿರೋಧ ಪಕ್ಷದ ನಾಯಕನಿಗೆ ಗೌರವ ನೀಡುವಷ್ಟು ಕನಿಷ್ಠ ಜ್ಞಾನ ಅವರಲ್ಲಿ ಇಲ್ಲದಾಗಿದೆ. ಖರ್ಗೆ ಅವರ ಮೈಬಣ್ಣದ ಬಗ್ಗೆ ನೀಡಿರುವ ಹೇಳಿಕೆ ಆರಗ ಅವರ ಘನತೆಗೆ ಶೋಭೆ ತರುವುದಿಲ್ಲ ಎಂದು ಟೀಕಿಸಿದ್ದಾರೆ.
ಬಿಜೆಪಿ ನಮ್ಮದು ಸುಸಂಸ್ಕೃತರ ಪಕ್ಷ ಎಂದು ಹೇಳಿಕೊಳ್ಳುತ್ತದೆ, ಆದರೆ ಆರಗ ಜ್ಞಾನೇಂದ್ರ ಅವರ ಹೇಳಿಕೆಯನ್ನು ಗಮನಿಸಿದರೆ ಇದು ಯಾವ ಸಂಸ್ಕೃತಿ, ವರ್ಣಬೇಧ ನೀತಿಯನ್ನು ಇನ್ನೂ ಜೀವಂತವಾಗಿಡಲಾಗಿದೆಯೇ ಎನ್ನುವ ಪ್ರಶ್ನೆ ಮೂಡುತ್ತದೆ. ಒಬ್ಬ ಸಜ್ಜನ ರಾಜಕಾರಣಿ, ವಿರೋಧ ಪಕ್ಷದ ನಾಯಕ ಹಾಗೂ ದಲಿತ ಮುಖಂಡನಿಗೆ ನೋವಾಗುವ ರೀತಿಯಲ್ಲಿ ಹೇಳಿಕೆ ನೀಡಿರುವ ಆರಗ ಜ್ಞಾನೇಂದ್ರ ಅವರು ತಕ್ಷಣ ಖರ್ಗೆ ಅವರ ಬಳಿ ಬಹಿರಂಗ ಕ್ಷಮೆಯಾಚಿಸಬೇಕು. ಕೇವಲ ವಿಷಾದ ವ್ಯಕ್ತಪಡಿಸಿ ವಿಷಯಾಂತರ ಮಾಡುವ ಪ್ರಯತ್ನ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.
ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಮತ್ತು ದಲಿತರ ಮೇಲೆ ನೈಜ ಗೌರವವಿದ್ದರೆ ತಕ್ಷಣ ಆರಗ ಜ್ಞಾನೇಂದ್ರ ಅವರನ್ನು ಪಕ್ಷದಿಂದ ಉಚ್ಛಾಟಿಸಲಿ ಎಂದು ಸವಾಲು ಹಾಕಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*