ಮಡಿಕೇರಿ ಆ.6 : ಪೊಲೀಸ್ ಸಿಬ್ಬಂದಿಯೊಬ್ಬರು ಮರದಿಂದ ಬಿದ್ದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದ ಕಾನ್‌ಬೈಲ್ ನಲ್ಲಿ ನಡೆದಿದೆ.
ಮಡಿಕೇರಿ ಕೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರAಜನ್ ಅವರ ಗನ್ ಮ್ಯಾನ್ ಆಗಿದ್ದ ಲೋಕೇಶ್ ಪೂಜಾರಿ(37) ಮೃತ ದುರ್ದೈವಿಯಾಗಿದ್ದಾರೆ.
ತಮ್ಮ ತೋಟದಲ್ಲಿ ಮಾವಿನ ಮರ ಏರಿ ಅದರ ಕೊಂಬೆಗೆ ಕಸಿ ಮಾಡುವ ಸಂದರ್ಭ ರಕ್ತದೊತ್ತಡ ಕಡಿಮೆಯಾಗಿ 50 ಅಡಿ ಎತ್ತರದಿಂದ ನೆಲಕ್ಕೆ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರು ಆ ವೇಳೆಗೆ ಅವರು ಮೃತಪಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮೃತ ಲೋಕೇಶ್ ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಸಿಬ್ಬಂದಿಯಾಗಿದ್ದ ಲೋಕೇಶ್ ಕಳೆದ 12 ವರ್ಷಗಳ ಕಾಲ ಅಪ್ಪಚ್ಚು ರಂಜನ್ ಅವರ ಗನ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಈ ಘಟನೆ ಕುರಿತು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
::: ಕಂಬನಿ :::
ಲೋಕೇಶ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಆಗಮಿಸಿದ ಮಾಜಿ ಶಾಸಕರುಗಳಾದ ಅಪ್ಪಚ್ಚು ರಂಜನ್ ಹಾಗೂ ಕೆ.ಜಿ.ಬೋಪಯ್ಯ ಕಂಬನಿ ಮಿಡಿದರು.
ಲೋಕೇಶ್ ಕಾರ್ಯದಕ್ಷತೆಯ ಬಗ್ಗೆ ನೆನಪಿಸಿಕೊಂಡು ಕಣ್ಣೀರು ಹಾಕಿದ ಅಪ್ಪಚ್ಚು ರಂಜನ್ ಅವರನ್ನು ಬೋಪಯ್ಯ ಸಂತೈಸಿದರು. ಪೊಲೀಸ್ ಇಲಾಖೆ ಸಿಬ್ಬಂದಿಗಳು, ವಿವಿಧ ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳ ಪ್ರಮುಖರು ಹಾಗೂ ಸಾರ್ವಜನಿಕರು ಮೃತರ ಅಂತಿಮ ದರ್ಶನ ಪಡೆದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*