ಮಡಿಕೇರಿ ಆ. 7 : ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢ ಶಾಲಾ ವಿಭಾಗದಲ್ಲಿ ರೋಟರಿ ಇಂಟರಾಕ್ಟ್ ಕ್ಲಬ್ ನ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮ ವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ ರೋಟರಿ ಮಿಸ್ಟಿ ಹಿಲ್ಸ್ ನ ಇಂಟರಾಕ್ಟ್ ಸಮಿತಿ ಅಧ್ಯಕ್ಷ ಕಟ್ಟೆಮನೆ ಸೋನಾಜಿತ್, ಪದಗ್ರಹಣಾಧಿಕಾರಿಯಾಗಿ ಪ್ರಮಾಣ ವಚನ ಬೋಧಿಸಿದರು. ವಿದ್ಯಾಥಿ೯ಗಳಲ್ಲಿ ನಾಯಕತ್ವ ಗುಣ ಮತ್ತು ಸಾಮಾಜಿಕ ಹೊಣೆಗಾರಿಕೆ ಬೆಳೆಸುವಲ್ಲಿ ರೋಟರಿಯ ವಿದ್ಯಾಥಿ೯ ಘಟಕಗಳು ಸಹಕಾರಿ ಎಂದೂ ಸೋನಾಜಿತ್ ಹೇಳಿದರು.
ರೋಟರಿ ಮಿಸ್ಟಿ ಹಿಲ್ಸ್ ನ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಮಾತನಾಡಿ, ನಾಪೋಕ್ಲುವಿನ ಕನಾ೯ಟಕ ಪಬ್ಲಿಕ್ ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ವತಿಯಿಂದ 12 ವಷ೯ಗಳ ಹಿಂದೆ ಇಂಟರ್ಯಾಕ್ಟ್ ಘಟಕ ಪ್ರಾರಂಭಿಸಿದ್ದು ಅತ್ಯಂತ ಸಕ್ರಿಯವಾಗಿ ವಿದ್ಯಾಥಿ೯ಗಳು ಕಾಯ೯ಯೋಜನೆ ಕೈಗೊಳ್ಳುತ್ತಿದ್ದಾರೆ. ಈ ಮೂಲಕ ಸಾಮಾಜಿಕ ಬದ್ದತೆಯನ್ನು ಈ ವಿದ್ಯಾಥಿ೯ಗಳಲ್ಲಿ ಕಾಣಬಹುದಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಕಾರ್ಯದರ್ಶಿ ರತ್ನಾಕರ್ ರೈ, ಜಗದೀಶ್, ಅಜಿತ್ ನಾಣಯ್ಯ, ಕಾರ್ಯಪ್ಪ, ಉಪ ಪ್ರಾಂಶುಪಾಲ ಶಿವಣ್ಣ ಉಪಸ್ಥಿತರಿದ್ದರು.
ಇಂಟರಾಕ್ಟ್ ಕ್ಲಬ್ ವತಿಯಿಂದ 2022-23ನೇ ಸಾಲಿನಲ್ಲಿ 10ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಪಡೆದು ಉತ್ತೀರ್ಣಳಾದ ಫಾತಿಮತ್ ಶೈಮ ಹಾಗೂ ವರ್ಗಾವಣೆಗೊಂಡ ಶಿಕ್ಷಕಿ ಅಶ್ವಿನಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಂತೆಯೇ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಶೈಮಳಿಗೆ ಪ್ರೋತ್ಸಾಹ ಧನ ನೀಡಿ ಅಭಿನಂದಿಸಲಾಯಿತು.
ನೂತನ ಸಮಿತಿಗೆ ವಿದ್ಯಾರ್ಥಿಗಳಾದ ಮೊಹಮ್ಮದ್ ಆಸ್ಕರ್ ಅಧ್ಯಕ್ಷನಾಗಿ, ಮುನೀರ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಘಟಕದ ಸಂಯೋಜಕಿ ಶಿಕ್ಷಕಿ ಉಷಾರಾಣಿ, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.
ಮುನೀರ ಕಳೆದ ಸಾಲಿನ ವರದಿ ವಾಚಿಸಿ, ಸಿಂಚನ ರೈ ಲೆಕ್ಕಪತ್ರ ಮಂಡಿಸಿ. ಮುನವೀರುನ್ನಿಸ ವಂದಿಸಿ, ಸೋನಿಕ ನಿರೂಪಿಸಿದರು.








