ಮಡಿಕೇರಿ, ಆ.7 : ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
2023-24ನೇ ಸಾಲಿನ ಯೋಜನೆಗಳಾದ ಉತ್ಪಾದನೆ ಮತ್ತು ಉತ್ಪಾದಕತೆಯ ವರ್ಧನೆಗೆ ಸಂಬಂಧಿಸಿದ ಯೋಜನೆಗಳು ಮೀನು ಕೃಷಿ ಕೊಳಗಳ ನಿರ್ಮಾಣ ಹೂಡಿಕೆ ವೆಚ್ಚದೊಂದಿಗೆ, ಒಳನಾಡಿನಲ್ಲಿ ಬಯೋಪ್ಲೋಕ್ ಕೊಳಗಳ ನಿರ್ಮಾಣ(ಹೆಕ್ಟೇರ್ 14 ಲಕ್ಷ ರೂ ಹೂಡಿಕೆ ವೆಚ್ಚ ಸೇರಿದಂತೆ), ಜೀವಂತ ಮೀನು ಮಾರಾಟ ಕೇಂದ್ರಗಳು, ಸಣ್ಣ ಆರ್‍ಎಎಸ್ (100 ಮೀ. 31 ಟ್ಯಾಂಕ್ ಬಯೋಪ್ಲೋಕ್ (4 ಮೀ ಡಯಾ 1.5 ಮೀ ಎತ್ತರದ 7 ಟ್ಯಾಂಕ್‍ಗಳು) ಘಟಕವನ್ನು ಸ್ಥಾಪಿಸುವುದು, ಯಾಂತ್ರಿಕೃತ ಎಫ್‍ಆರ್‍ಪಿ ಬೋಟ್. ಈ ಯೋಜನೆಗಳಿಗೆ ರೈತರು ಅರ್ಜಿ ಸಲ್ಲಿಸಲು ಆಗಸ್ಟ್, 22 ಕೊನೆಯ ದಿನವಾಗಿದೆ. ಜಿಲ್ಲೆಯ ರೈತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೋರಿದೆ.
ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಮಡಿಕೇರಿ, ಪೊನ್ನಂಪೇಟೆ ಮತ್ತು ಸೋಮವಾರಪೇಟೆ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*