ಮಡಿಕೇರಿ ಆ.7 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಹಯೋಗದೊಂದಿಗೆ ಸ್ತನ್ಯಪಾನ ಸಪ್ತಾಹ ಮತ್ತು ಶಿಶು ಪ್ರದರ್ಶನ ಕಾರ್ಯಕ್ರಮವು ಎಂ.ಬಾಡಗ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅವರು ಸ್ತನ್ಯಪಾನ ಸಪ್ತಾಹ ವನ್ನು ಆಗಸ್ಟ್ ಏಳರ ವರೆಗೆ ಎಲ್ಲಾ ಅಂಗನವಾಡಿ ಕೇಂದ್ರದಲ್ಲಿ ನಡೆಸಲಾಗಿದೆ ಎಂದರು.
ನಂತರ ಸ್ತನ್ಯಪಾನದ ಮಹತ್ವದ ಬಗ್ಗೆ, ಪೌಷ್ಟಿಕ ಆಹಾರ, ವ್ಯಾಯಾಮದ ಕುರಿತು ಹಾಗೂ ಮಾನಸಿಕ ಮತ್ತು ದೈಹಿಕ ಆರೋಗ್ಯದ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ತೂಕದ ಮಹತ್ವ ಮತ್ತು ಇಲಾಖೆಯಿಂದ ದೊರಕುವ ಸೌಲಭ್ಯಗಳ ಬಗ್ಗೆ ವಿವರಿಸಿದರು. ಅಂಗನವಾಡಿಯಲ್ಲಿ ದೊರಕುವ ಆಹಾರಗಳನ್ನು ಕೇಂದ್ರದಲ್ಲಿಯೇ ಪರಿಶೀಲಿಸಿ ಪಡೆಯಲು ತಿಳಿಸಿದರು.
ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಲಲಿತಾ ಅವರು ಶಿಶು ಪ್ರದರ್ಶನ ಕಾರ್ಯಕ್ರಮದ ಉದ್ದೇಶಗಳನ್ನು ವಿವರವಾಗಿ ತಿಳಿಸುತ್ತಾ, ಮೈಲಿಗಲ್ಲುಗಳ ಬಗ್ಗೆ, ಲಸಿಕಾ ಕರಣದ ಬಗ್ಗೆ ವಿವರವಾಗಿ ತಿಳಿಸಿದರು.
ಶಿಶು ಪ್ರದರ್ಶನದಲ್ಲಿ ಪ್ರಾದ್ವಿ(ಪ್ರಥಮ ಸ್ಥಾನ) ದಿಶಾ(ದ್ವಿತೀಯ ಸ್ಥಾನ) ಅದ್ವಿತ್(ತೃತೀಯ ಸ್ಥಾನ) ಪಡೆದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಗರ್ಭಿಣಿ ಬಾಣಂತಿ ಮತ್ತು ಮಕ್ಕಳ ಪೌಷ್ಟಿಕ ಮಟ್ಟವನ್ನು ಗುರುತಿಸಲಾಯಿತು.
ಕಿರಿಯ ಪ್ರಾಥಮಿಕ ಶಾಲೆ ಬಾಡಗದ ಮುಖ್ಯ ಶಿಕ್ಷಕರಾದ ಯಮುನಾ, ಸಹ ಶಿಕ್ಷಕರಾದ ಕುಮುದಿನಿ, ಆಶಾ ಕಾರ್ಯಕರ್ತೆ ಚಂದ್ರಿಕಾ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಾಡಗ 2 ಅಂಗನವಾಡಿ ಕಾರ್ಯಕರ್ತೆ ಭವ್ಯ ಬಿ.ಆರ್. ಸ್ವಾಗತಿಸಿದರು. ಹಾಗೂ ಬಾಡಗ 1 ಅಂಗನವಾಡಿ ಕಾರ್ಯಕರ್ತೆ ಜಯಂತಿ ಬಿ.ಬಿ ವಂದಿಸಿದರು.
Breaking News
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*
- *ಯತಿಕಾರ್ಪ್ ಇಂಡಿಯಾ ಐಟಿ ಕಂಪನಿಯಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ : ಉತ್ತಮ ವೇತನ*
- *ಜ.25 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗಿಗೆ ಭೇಟಿ