ಮಡಿಕೇರಿ ಆ.8 : ಕೆಎಸ್‌ಆರ್‌ಟಿಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಯುವತಿಯೋರ್ವಳು ಮೃತಪಟ್ಟಿರುವ ಘಟನೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಗುಟ್ಟೆ ಜಯಮಂಗಳಿ ನದಿ ಸೇತುವೆ ಬಳಿ ನಡೆದಿದೆ.
ಗಾರ್ಮೆಂಟ್ಸ್ ಗೆ ನೌಕರರನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾಗೆ ನಗರ ಸಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ಜೋಗೆನಹಳ್ಳಿ ನಿವಾಸಿ ಲಕ್ಷ್ಮೀ (20) ಎಂಬಾಕೆ ತೀವ್ರವಾಗಿ ಗಾಯಗೊಂಡು ಮೃತಪಟ್ಟರು. ಎಂಟಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಮೃತ ಯುವತಿಯ ಕುಟುಂಬಕ್ಕೆ ಸಾಂತ್ವನ ಹೇಳಿದರು. ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.







