ಮಡಿಕೇರಿ ಆ.8 : ಹಾರಂಗಿ ಜಲಾಶಯದ ಬಳಿ ಇರುವ ತೋಟಗಾರಿಕೆ ಕ್ಷೇತ್ರಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ರೈತರಿಗೆ ತೆಂಗಿನ ಗಿಡಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ತೋಟಗಾರಿಕಾ ಪಿತಾಮಹ ಡಾ. ಎಂ.ಹೆಚ್. ಮರೀಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ರೈತರಿಗೆ ತೆಂಗಿನ ಗಿಡಗಳನ್ನು ವಿತರಿಸಿದರು.
ಈ ಸಂದರ್ಭ ಶಾಸಕರು ಹಾರಂಗಿ ತೋಟಗಾರಿಕೆ ಕ್ಷೇತ್ರದಲ್ಲಿರುವ ಮೀನುಗಾರಿಕೆ ಘಟಕ, ಎರೆಹುಳ ಉತ್ಪಾದನ ಘಟಕ ಹಾಗೂ ವನ್ಯ ಸಸಿ ಬೆಳೆಗಳ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.
ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವರದರಾಜ್, ಅಧಿಕಾರಿಗಳಾದ ಶೋಭ, ಜಿ.ಪಂ ಮಾಜಿ ಸದಸ್ಯರುಗಳಾದ ವಿ.ಪಿ.ಶಶಿಧರ್, ಕೆ.ಪಿ.ಚಂದ್ರಕಲ, ಕೆಪಿಸಿಸಿ ಸಂಯೋಜಕ ನಟೇಶ್ ಗೌಡ ಹಾಗೂ ಪ್ರಮುಖರು ಮತ್ತು ರೈತರು ಈ ಸಂಧರ್ಭ ಹಾಜರಿದ್ದರು.