ಮಡಿಕೇರಿ ಆ.9 : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿದ್ಯಾಸಂಸ್ಥೆಯಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಶಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿ ಒಕ್ಕೂಟವಾದ “ಅವಿನ್ಯಂ” ವನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಮೈಸೂರಿನ ಎನ್‍ಐಈ ಪ್ರಾಧ್ಯಾಪಕರಾದ ಡಾ. ರಘುವೀರ್, ಕೃತಕ ಬುದ್ಧಿಮತ್ತೆಯ ಮಹತ್ವ, ದೈನಂದಿನ ಜೀವನದಲ್ಲಿ ಅಳವಡಿಕೆ, ಮತ್ತು ಸಮಾಜದಲ್ಲಿ ಕೃತಕ ಬುದ್ಧಿಮತ್ತೆಯ ಪ್ರಭಾವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕೊಡವ ಏಜುಕೇಷನ್ ಸೊಸೈಟಿಯ ಅಧ್ಯಕ್ಷರಾದ ಡಾ. ಎಮ್.ಸಿ.ಕಾರ್ಯಪ್ಪ ಮಾತನಾಡಿ, ಹೇಗೆ ಕೃತಕ ಬುದ್ದಿಮತ್ತೆಯು ನಮ್ಮ ಸಮಾಜದಲ್ಲಿ ಬದಲಾವಣೆಗಳನ್ನು ತರುತ್ತಿದೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಬಸವರಾಜ್ ಮಾತನಾಡಿ, ವಿದ್ಯಾರ್ಥಿ ಒಕ್ಕೂಟದಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂದರು.
ವಿದ್ಯಾರ್ಥಿ ಒಕ್ಕೂಟದ ಲಾಂಛನವನ್ನು ಡಾ.ಎಂ.ಸಿ ಕಾರ್ಯಪ್ಪ ಬಿಡುಗಡೆ ಮಾಡಿದರು. ಸಂಯೋಜಕರಾದ (ಸಹ ಪ್ರಾಧ್ಯಾಪಕ) ಬಿ.ಎಂ. ಮುರಳೀಧರ್ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿ ಸದಸ್ಯರುಗಳಿಗೆ ಪ್ರಮಾಣ ವಚನ ಭೋದಿಸಿದರು. ಇದೇ ಸಂದರ್ಭ ವಿವಿಧ ಸ್ವರ್ಧೆಗಳಲ್ಲಿ ವಿಜೇತರಾದ ಸ್ವರ್ಧಿಗಳಿಗೆ ಬಹುಮಾನವನ್ನು ವಿತರಿಸಿಲಾಯಿತು.
ವೇದಿಕೆಯಲ್ಲಿ ವಿಭಾಗದ ಮುಖ್ಯಸ್ಥರಾದ ಡಾ. ರಾಮಕೃಷ್ಣ ಬೋರ್ಕರ್, ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷೆ ಶೈಲಜಾ ಉಪಸ್ಥಿತರಿದ್ದರು. ವಿವಿಧ ವಿಭಾಗೀಯ ಮುಖ್ಯಸ್ಥರುಗಳು, ಪ್ರಾದ್ಯಾಪಕ ವೃಂದದವರನ್ನು, ವಿಭಾಗದ ವಿದ್ಯಾರ್ಥಿಗಳನ್ನು ಡಾ. ರಾಮಕೃಷ್ಣ ಸ್ವಾಗತಿಸಿದರು. ನಿರೂಪಣೆಯನ್ನು ವಿದ್ಯಾರ್ಥಿಗಳಾದ ಕುಮಾರ ಭಾನುತೇಜ್ ಮತ್ತು ಕುಮಾರಿ ದಿಶಿತಾ ನಿರೂಪಿಸಿದರು. ವಂದನಾ ವಂದಿಸಿದರು.
ಕಾರ್ಯಕ್ರಮಕ್ಕೆ ಬಹುಮಾನಗಳನ್ನು ಬೆಂಗಳೂರುರಿನ ಡಿಲೈಥ್ ಟೆಕ್ನಾಲಜಿಸ್, ಪ್ರಾಯೋಜಿಸಿದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*