ಮಡಿಕೇರಿ ಆ.9 : ಮಡಿಕೇರಿ ಆಕಾಶವಾಣಿಯಲ್ಲಿ ಸಾಂದರ್ಭಿಕ ಉದ್ಘೋಷಕರಾಗಿ ಕೆಲಸ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಯೋಮಿತಿ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 50 ವರ್ಷ. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕನ್ನಡವನ್ನು ಚೆನ್ನಾಗಿ ಓದಲು ಮತ್ತು ಬರೆಯಲು ಗೊತ್ತಿರಬೇಕು. ಸ್ಪಷ್ಟ ಉಚ್ಛಾರಣೆ ಹೊಂದಿರಬೇಕು. ಕಂಪ್ಯೂಟರ್ ಬಳಸುವ ಜ್ಞಾನ ಇರಬೇಕು. ಇಂಗ್ಲೀಷ್ ಭಾಷೆಯಿಂದ ಕನ್ನಡಕ್ಕೆ ಮತ್ತು ಕನ್ನಡದಿಂದ ಇಂಗ್ಲೀಷ್‍ಗೆ ಭಾಷಾಂತರ ಮಾಡುವ ಸಾಮಥ್ರ್ಯ ಇರಬೇಕು.
ಪ್ರಚಲಿತ ವಿದ್ಯಮಾನ, ಕಲೆ, ಸಂಸ್ಕೃತಿ , ಸಂಗೀತ, ರಂಗಭೂಮಿ, ಚಲನಚಿತ್ರ, ಸಾಹಿತ್ಯ, ವಿಜ್ಞಾನ ಮತ್ತು ತಂತ್ರಜ್ಞಾನಗಳಲ್ಲಿ ಸಾಮಾನ್ಯ ಜ್ಞಾನ ಹೊಂದಿರಬೇಕು. ಮಡಿಕೇರಿ ನಿವಾಸಿಗಳಿಗೆ ಆದ್ಯತೆ. ಅರ್ಜಿ ಶುಲ್ಕ ರೂ.354 ಗಳನ್ನು ಅರ್ಜಿಯಲ್ಲಿ ನಮೂದಿಸಿರುವ ಪ್ರಸಾರ ಭಾರತಿ ಬ್ಯಾಂಕ್ ಖಾತೆಗೆ ವರ್ಗಾಯಿಸಬೇಕು.
ಲಿಖಿತ ಪರೀಕ್ಷೆ, ಧ್ವನಿ ಪರೀಕ್ಷೆ ಹಾಗೂ ಸಂದರ್ಶನ ಒಳಗೊಂಡ ಮೂರು ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ನಿಗದಿತ ಅರ್ಜಿ ಫಾರಂಗಳನ್ನು ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ರಜಾದಿನಗಳನ್ನು ಹೊರತುಪಡಿಸಿ ಆಕಾಶವಾಣಿ ಕೇಂದ್ರದಿಂದ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನ. ಇದು ಹುದ್ದೆಯಲ್ಲ ಅವಶ್ಯಕತೆಗೆ ಅನುಗುಣವಾಗಿ ಆಯಾಯ ದಿನಗಳಂದು ಕೆಲಸ ಮಾಡುವ ಅವಕಾಶ. ಯಾವುದೇ ಕಾರಣಕ್ಕೂ ಇದು ಖಾಯಂ ಆಗುವುದಿಲ್ಲ ಎಂದು ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರು/ ಕಾರ್ಯಕ್ರಮ ಮುಖ್ಯಸ್ಥರು ತಿಳಿಸಿದ್ದಾರೆ.
Breaking News
- *ನ.26 ರಂದು ಸಿಎನ್‌ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*
- *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆ*
- *ವೀರ ಸೇನಾನಿಗಳಿಗೆ ಅಗೌರವ : ಕೊಡವ ಮಕ್ಕಡ ಕೂಟ ಖಂಡನೆ : ಕಿಡಿಗೇಡಿಯ ಬಂಧನಕ್ಕೆ ಆಗ್ರಹ*
- *ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವಾರ್ಷಿಕ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*