ನಾಪೋಕ್ಲು ಆ.10 : ನೆಲಜಿ ಗ್ರಾಮದ ಅಂಬಲ ಮಹಿಳಾ ಸಮಾಜದ ವತಿಯಿಂದ ಕಕ್ಕಡ ಹಬ್ಬದ ಪ್ರಯುಕ್ತ ಆ.12 ರಂದು ವಿಶೇಷ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಂಬಲ ಮಹಿಳಾ ಸಮಾಜದ ಅಧ್ಯಕ್ಷೆ ಅಪ್ಪು ಮಣಿಯಂಡ ಡೇಝಿ ಸೋಮಣ್ಣ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಬೆಳಿಗ್ಗೆ 11.30 ಗಂಟೆಗೆ ನೆಲಜಿ ಶ್ರೀ ಇಗ್ಗುತ್ತಪ್ಪ ದೇವಸ್ಥಾನದಲ್ಲಿ ಕಕ್ಕಡ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಅಪರಾಹ್ನ 1.30 ಕ್ಕೆ ನೆಲಜಿ ದವಸ ಭಂಡಾರದ ಕಟ್ಟಡದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಗ್ರಾಮದ ಕಾಫಿ ಬೆಳೆಗಾರ ಮಂಡೀರ ಸರೋಜಾ ದೇವಯ್ಯ ಹಾಗೂ ವಿರಾಜಪೇಟೆಯ ವುಮೆನ್ಸ್ ವಿಂಗ್ ಅಧ್ಯಕ್ಷೆ ಮನೆಯಪಂಡ ಶಾಂತಿ ಸತೀಶ್ ಪಾಲ್ಗೊಳ್ಳಲಿದ್ದಾರೆ ಡೇಝಿ ಸೋಮಣ್ಣ ಎಂದರು.
ಈ ಸಂದರ್ಭ ಕಾರ್ಯಕ್ರಮದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ ,ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಐಮುಡಿಯಂಡ ರಾಣಿ ಮಾಚಯ್ಯ ಹಾಗೂ ಮಡಿಕೇರಿ ಆಕಾಶ ವಾಣಿಯ ನಿವೃತ್ತ ಉದ್ಘೋಷಕಿ ಕೂಪದಿರ ಶಾರದಾ ನಂಜಪ್ಪ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಲಹಾ ಸಮಿತಿ ಅಧ್ಯಕ್ಷೆ ಮಣವಟ್ಟೀರ ಕಮಲ ಬೆಳ್ಳಿಯಪ್ಪ,ನಿರ್ದೇಶಕರಾದ ಮಣವಟ್ಟೀರ ಸುಶೀಲ ಚಂಗಪ್ಪ ,ಮಣವಟ್ಟೀರ ಜಾನ್ಸಿ ತಿಮ್ಮಯ್ಯಇದ್ದರು.
ವರದಿ : ದುಗ್ಗಳ ಸದಾನಂದ








