ಮಡಿಕೇರಿ ಆ.11 : ಮನೆ ಹಿಂಭಾಗ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಿದ್ದಾಪುರ ವ್ಯಾಪ್ತಿಯ ಅವರೆಗುಂದ ನಿವಾಸಿ ಆಟೋ ಚಾಲಕ ಹರೀಶ(48) ಎಂಬಾತ ತನ್ನ ಮನೆಯ ಹಿಂಭಾಗದಲ್ಲಿ ಐದು ಗಾಂಜಾ ಗಿಡಗಳನ್ನು ಬೆಳೆಸಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ಮಾಲು ಸಹಿತ ಆರೋಪಿ ಹರೀಶ್‍ನನ್ನು ಬಂಧಿಸಿ 2 ಕೆ.ಜಿ.ಗಾಂಜಾ ವಶಪಡಿಸಿಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾರ್ಗದರ್ಶನದಲ್ಲಿ ಡಿವೈಎಸ್‍ಪಿ ಜಗದೀಶ್ ಮತ್ತು ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ಮುಖ್ಯಪೇದೆ ಲಕ್ಷ್ಮೀಕಾಂತ್ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.












