ಮಡಿಕೇರಿ ಆ.10 : ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಆಗಸ್ಟ್, 12, 13 ಮತ್ತು 14 ರಂದು ನಡೆಯಲಿರುವ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ ಹಾಗೂ ಸಭಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.
ಆಗಸ್ಟ್, 11 ರ ಮಧ್ಯರಾತ್ರಿ 12 ಗಂಟೆಯಿಂದ ಆಗಸ್ಟ್, 13 ರ ಬೆಳಗ್ಗೆ 6 ಗಂಟೆಯವರೆಗೆ ಮಾದಾಪುರ ಹಾಗೂ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ, ಆಗಸ್ಟ್, 12 ರಂದು ಮಧ್ಯರಾತ್ರಿ 12 ಗಂಟೆಯಿಂದ ಆಗಸ್ಟ್, 13 ರ ಮಧ್ಯರಾತ್ರಿ 12 ಗಂಟೆಯವರೆಗೆ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಪಟ್ಟಣ ವ್ಯಾಪ್ತಿಯ ಸುತ್ತಮುತ್ತಲಿನ 10 ಕಿ,ಮೀ. ಹಾಗೂ ಆಗಸ್ಟ್, 14 ರ ಬೆಳಗ್ಗೆ 6 ಗಂಟೆಯಿಂದ ಆಗಸ್ಟ್, 14 ರ ಮಧ್ಯರಾತ್ರಿ 12 ಗಂಟೆಯವರೆಗೆ ಕುಶಾಲನಗರ ಪಟ್ಟಣ ಹಾಗೂ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್, ರೆಸ್ಟೋರೆಂಟ್ ಮತ್ತು ಕ್ಲಬ್ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.
Breaking News
- *ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ : ಕಾಂಗ್ರೆಸ್ ಕಾರ್ಯಕರ್ತ ಅಮಾನತು*
- *ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ*
- *ಸಿಎನ್ಸಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ದಿನ ಆಚರಣೆ*
- *ಪದ್ಮಶ್ರೀ ಪುರಸ್ಕೃತ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಅಭಿನಂದನೆ*
- *‘ಕೃತಕ ಅಂಗಾಂಗಗಳ ಜೋಡಣೆ ಮತ್ತು ಆರೋಗ್ಯ ತಪಾಸಣೆ’ ಶಿಬಿರ : ಬಡವರಿಗೆ ಅಗತ್ಯ ಆರೋಗ್ಯ ಸೌಲಭ್ಯ : ಸಚಿವ ಭೋಸರಾಜು*
- *ರಾಜ್ಯದಲ್ಲೇ ವಿನೂತನ ಪ್ರಯತ್ನ : ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ ಉದ್ಘಾಟನೆ*
- *ಕೆ.ಎಸ್.ದರ್ಶನ್ ಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ*
- *ಕಾಲ್ಚೆಂಡು ಪಂದ್ಯಾವಳಿ : ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್*
- *ವಿರಾಜಪೇಟೆ : ವಿವಿಧತೆಯಲ್ಲಿ ಏಕತೆಕಂಡಿರುವ ಸಂವಿಧಾನವನ್ನು ಗೌರವಿಸುವಂತಾಗಬೇಕು : ವಕೀಲ ಪುಷ್ಪರಾಜ್*
- *ಸೋಮವಾರಪೇಟೆ : ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*