ಸುಂಟಿಕೊಪ್ಪ ಆ.11 : ಸುಂಟಿಕೊಪ್ಪ ಗ್ರಾ.ಪಂ ಸದಸ್ಯೆ, ಎಸ್.ಡಿ.ಪಿ.ಐ ಕಾರ್ಯಕರ್ತೆಯಾಗಿ ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದ ರೇಷ್ಮಾ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಗ್ರಾಮ ಪಂಚಾಯತಿ ಎರಡನೇ ಹಂತದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೇರಲು ಕಾರಣರಾದ ಎಸ್.ಡಿ.ಪಿ.ಐ ಪಕ್ಷದ ಮುಖಂಡರ ನಿಲುವನ್ನು ಖಂಡಿಸಿ ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಇದೇ ವೇಳೆ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್, ಜಿ.ಪಂ ಮಾಜಿ ಅಧ್ಯಕ್ಷ ಕೆ.ಪಿ.ಚಂದ್ರಕಲಾ, ಮತ್ತು ಪಿ.ಎಂ ಲತೀಫ್, ಗ್ರಾ.ಪಂ ಉಪಾಧ್ಯಕ್ಷೆ ಶಿವಮ್ಮ, ಸದಸ್ಯ ರಫೀಕ್ ಖಾನ್ ಹಾಗೂ ಪ್ರಮುಖರು ಹಾಜರಿದ್ದರು.









