ನಾಪೋಕ್ಲು ಆ.11 : ಬಲ್ಲಮಾವಟಿ ಗ್ರಾ.ಪಂ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಾಂತಿ ಪೂವಯ್ಯ ಹಾಗೂ ಉಪಾಧ್ಯಕ್ಷರಾಗಿ ಚೋಕಿರ ಬಾಬಿ ಭೀಮಯ್ಯ ಆಯ್ಕೆಯಾದರು.
ಗ್ರಾ.ಪಂಚಾಯಿತಿ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಚುನಾವಣಾ ಅಧಿಕಾರಿಯಾಗಿ ಮಡಿಕೇರಿ ತಾಲೂಕು ತಹಸಿಲ್ದಾರ್ ಪ್ರವೀಣ್ ಕುಮಾರ್ ಕಾರ್ಯನಿರ್ವಹಿಸಿದರು.
ಈ ಸಂದರ್ಭ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಅಪ್ಪಚೆಟ್ಟೊಳಂಡ ಮನು ಮುತ್ತಪ್ಪ, ಶಕ್ತಿ ಕೇಂದ್ರದ ಪ್ರಮುಖರಾದ ಚಂಗೆಟ್ಟಿರ ಕುಮಾರ್ ಸೋಮಣ್ಣ, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರಾದ ಕರವಂಡ ಲವ ನಾಣಯ್ಯ, ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣಗಳ ಸದಸ್ಯರಾದ ಕರವಂಡ ಅಪ್ಪಣ್ಣ, ಬೂತ್ ಅಧ್ಯಕ್ಷರಾದ ಚಿಯಂಡಿರ ದಿನೇಶ್, ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರು ,ಬಿಜೆಪಿಯ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.
ವರದಿ : ದುಗ್ಗಳ ಸದಾನಂದ